ಉತ್ತರ ಪ್ರದೇಶ: ಉತ್ತರ ಪ್ರದೇಶ ಅಮ್ರೋಹಾದಲ್ಲಿ ಅಪ್ರಾಪ್ತ ಬಾಲಕಿಯನ್ನು ಮನೆಯಿಂದ ಅಪಹರಿಸಿ ಇಬ್ಬರು ದುಷ್ಕರ್ಮಿಗಳು ಆಕೆಯ ಮೇಲೆ ಹಲ್ಲೆ ನಡೆಸಿದ್ದಷ್ಟೇ ಅಲ್ಲದೆ ಆಯಸಿಡ್ ಎರಚಿ ಸುಟ್ಟಿರುವ ಘಟನೆ ಜರುಗಿದೆ.
ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ರಾಹ್ರಾ ಪೊಲೀಸ್ ವ್ಯಾಪ್ತಿಯಲ್ಲಿರುವ ಪತ್ರಾ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೀವ್ ಕುಮಾರ್ ಸಿಂಗ್ ಹೇಳಿದ್ದಾರೆ. ಘಟನೆ ಬೆಳಗಿನ ಜಾವ 3.30ರ ಸುಮಾರಿಗೆ ನಡೆದಿದೆ, ಬಾಲಕಿ ಗಂಭೀರ ಸ್ಥಿತಿಯಲ್ಲಿದ್ದು, ಉನ್ನತ ವೈದ್ಯಕೀಯ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು.
ಬಾಲಕಿಯ ಸಹೋದರ ದಾಳಿಯ ಭಯಾನಕ ವಿವರಗಳನ್ನು ವಿವರಿಸಿದ್ದು, ಆಕೆ ಮಲಗಿದ್ದಾಗ ಬೆಳಗಿನ ಜಾವ ಬಂದ ದುಷ್ಕರ್ಮಿಗಳು ಆಕೆಯ ಬಾಯಿ ಮುಚ್ಚಿಸಿ ಅರಣ್ಯಕ್ಕೆ ಎಳೆದೊಯ್ದಿದ್ದರು.
ಪ್ರಾಥಮಿಕ ತನಿಖೆಯಲ್ಲಿ ಆಕೆಯ ಮೇಲೆ ಆ ವ್ಯಕ್ತಿಗಳಿಗೆ ಯಾವುದೋ ದ್ವೇಷವಿದ್ದಂತೆ ಕಾಣುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ಬಾಲಕಿಯ ಸಹೋದರ ರಹ್ರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಎಫ್ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದರು.