ಲಕ್ನೋ: ಪ್ರಯಾಗ್ ರಾಜ್ ಮಹಾಕುಂಭಕ್ಕೆ ತೆರಳಿದ್ದ ಬೀದರ್ ಮೂಲದ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಕಾಶಿ ಬಳಿ ಅಘತಾತ ಸಂಭವಿಸಿದ್ದು, ಬೀದರ್ನ ಆರು ಮಂದಿ ಸಾವನ್ನಪ್ಪಿದ್ದಾರೆ.
ಮಿರಾಜಾಪೂರ್ ಜಿಲ್ಲೆಯ ರೂಪಾಪೂರ ಬಳಿ ಲಾರಿ ಮತ್ತು ಕ್ರೂಸರ್ ನಡುವೆ ಡಿಕ್ಕಿಯಾಗಿದ್ದು, ಆರು ಮಂದಿ ಸಾವನ್ನಪ್ಪಿದ್ದು, ಉಳಿದವರ ಸ್ಥಿತಿ ಚಿಂತಾಜನಕವಾಗಿದೆ.
ಬೀದರ್ ನಗರದ ಲಾಡಗೇರಿ ಬಡಾವಣೆಯ ನಿವಾಸಿಗಳಾದ ಸುನೀತಾ(35) ಸಂತೋಷ್ (43) ನೀಲಮ್ಮ (60) ಸೇರಿದಂತೆ ಆರು ಮಂದಿ ದುರ್ಮರಣಕ್ಕೀಡಾಗಿದ್ದಾರೆ.
ಲಾಡಗೇರಿಯ 12 ಮಂದಿ ಒಂದೇ ಗಾಡಿಯಲ್ಲಿ ಮಹಾಕುಂಭ ಮೇಳಕ್ಕೆ ತೆರಳಿದ್ದರು. ಪುಣ್ಯ ಸ್ನಾನ ಮಾಡಿದ ಬಳಿಕ ಪ್ರಯಾಗ್ರಾಜ್ನಿಂದ ಕಾಶಿ ಕಡೆಗೆ ತೆರಳುತ್ತಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಗಾಯಗೊಂಡವರನ್ನು ಸ್ಥಳಿಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ.
