ಉತ್ತರ ಪ್ರದೇಶ:- ಇಲ್ಲಿನ ಸೋನ್ಭದ್ರಾ ಜಿಲ್ಲೆಯಲ್ಲಿ ಯುವಕನೊಬ್ಬನನ್ನು ಥಳಿಸಿ ಬಾಯಿಯೊಳಗೆ ಮೂತ್ರ ಮಾಡಿರುವ ಹೇಯ ಕೃತ್ಯ ನಡೆದಿದೆ
ವ್ಯಕ್ತಿಯೊಬ್ಬ ಯುವಕನನ್ನು ಕೆಟ್ಟದಾಗಿ ಥಳಿಸಿ, ಮುಖ, ಬಾಯಿಗೆ ಮೂತ್ರ ವಿಸರ್ಜಿಸಿದ್ದಲ್ಲದೇ ಘಟನೆಯ ವಿಡಿಯೋವನ್ನು ರೆಕಾರ್ಡ್ ಮಾಡಿಕೊಂಡಿದ್ದಾನೆ.
ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಮುಖ ಆರೋಪಿಯನ್ನೂ ಬಂಧಿಸಲಾಗಿದೆ. ಶಕ್ತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಯುವಕನನ್ನು 22 ವರ್ಷದ ಪವನ್ ಖಾರ್ವಾರ್ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಸೆಪ್ಟೆಂಬರ್ 26 ರ ಸಂಜೆ, ಅಂಕಿತ್ ಭಾರ್ತಿ ಎಂಬ ವ್ಯಕ್ತಿ ಮತ್ತು ಅವನ ಕೆಲವು ಸಹಚರರು ಪವನ್ ಮೇಲೆ ಹಲ್ಲೆ ನಡೆಸಿದ್ದಾರೆ.
ಈ ವೇಳೆ ಬಾಯಿ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ರಕ್ತಸಿಕ್ತವಾಗಿದ್ದ ವ್ಯಕ್ತಿಯ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ. ಘಟನೆಯ ಬಳಿಕ ಯುವಕ ಸಹೋದರ ಶಿವಕುಮಾರ್ ಖಾರ್ವಾರ್ ಅವರೊಂದಿಗೆ ಮಧ್ಯಪ್ರದೇಶದ ಬೈದಾನ್ಗೆ ಹೋಗಿದ್ದರು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕಲು ಸಿಂಗ್ ಹೇಳಿದ್ದಾರೆ.
ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದ ಕಾರಣ ಪೊಲೀಸರಿಗೆ ವಿಷಯವನ್ನು ತಿಳಿಸಲಿಲ್ಲ, ಘಟನೆ ನಡೆದ ಸುಮಾರು ಒಂದು ವಾರದ ನಂತರ, ಶಿವಕುಮಾರ್ ಎಕ್ಸ್ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು.
ಸಿಎಂ, ಡಿಜಿಪಿ ಮತ್ತು ಇತರ ಅಧಿಕಾರಿಗಳನ್ನು ಟ್ಯಾಗ್ ಮಾಡಿ ಕ್ರಮಕ್ಕೆ ಒತ್ತಾಯಿಸಿದರು ಆಗ ಪೊಲೀಸರ ಗಮನಕ್ಕೆ ಈ ವಿಷಯ ಬಂದಿದೆ. ಆರೋಪಿ ಅಂಕಿತ್ ಭಾರ್ತಿಯನ್ನು ಬಂಧಿಸಲಾಗಿದೆ.