ಭಾರತದ ಮರಿಯನ್ ಬಯೋಟೆಕ್ ತಯಾರಿಸಿದ ಮಕ್ಕಳ ಕೆಮ್ಮಿನ ಸಿರಪ್ ಸೇವಿಸಿ 68 ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿ ಉಜ್ಬೇಕಿಸ್ತಾನದ ನ್ಯಾಯಾಲಯವು ಆರು ತಿಂಗಳ ಸುದೀರ್ಘ ವಿಚಾರಣೆಯ ನಂತರ ಸೋಮವಾರ ತೀರ್ಪು ಪ್ರಕಟಿಸಿದೆ.
ಪ್ರಕರಣದ ತನಿಖೆಯನ್ನು ಕೂಲಂಕುಶವಾಗಿ ನಡೆಸಿದ ಬಳಿಕ ಇದೀಗ 23 ಮಂದಿಗೆ ಜೈಲು ಶಿಕ್ಷೆ ವಿದಿಸಿ ಆದೇಶ ಹೊರಡಿಸಿದೆ.
ಮಧ್ಯ ಏಷ್ಯಾದ ರಾಷ್ಟ್ರವು ಈ ಹಿಂದೆ ಔಷಧಿಗಳಿಗೆ ಸಂಬಂಧಿಸಿದ 65 ಸಾವುಗಳನ್ನ ವರದಿ ಮಾಡಿತ್ತು. ಕಳೆದ ತಿಂಗಳು ತಾಷ್ಕೆಂಟ್ ನಗರದ ನ್ಯಾಯಾಲಯದ ಪ್ರಾಸಿಕ್ಯೂಟರ್ಗಳು ಸಾವಿನ ಸಂಖ್ಯೆಯನ್ನ ನವೀಕರಿಸಿದರು ಮತ್ತು ವಿಚಾರಣೆಯ ಸಮಯದಲ್ಲಿ ಇನ್ನೂ ಇಬ್ಬರ ವಿರುದ್ಧ ಆರೋಪ ಹೊರಿಸಲಾಗಿದೆ ಎಂದು ಹೇಳಿದರು.
ಒಬ್ಬ ಭಾರತೀಯ ಪ್ರಜೆ ಸೇರಿದಂತೆ ಪ್ರತಿವಾದಿಗಳು ಎರಡರಿಂದ 20 ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ವಿಧಿಸಲಾಗಿದೆ. ತೆರಿಗೆ ವಂಚನೆ, ಕಳಪೆ ಗುಣಮಟ್ಟದ ಅಥವಾ ನಕಲಿ ಔಷಧಿಗಳ ಮಾರಾಟ, ಕಚೇರಿ ದುರುಪಯೋಗ, ನಿರ್ಲಕ್ಷ್ಯ, ಫೋರ್ಜರಿ ಮತ್ತು ಲಂಚದ ಆರೋಪಗಳಲ್ಲಿ ತಪ್ಪಿತಸ್ಥರು ಎಂದು ತಿಳಿದು ಬಂದಿದೆ.