ಉತ್ತರ ಕರ್ನಾಟಕ ಭಾಗದ ಅದರಲ್ಲೂ ಹುಬ್ಬಳ್ಳಿ, ಧಾರವಾಡ ಅವಳಿನಗರದ ಜನತೆಯ ಬಹು ನಿರೀಕ್ಷಿತ ವಂದೇ ಭಾರತ ರೈಲು ನಾಳೆಯಿಂದ ಅಧಿಕೃತವಾಗಿ ಧಾರವಾಡ ಮತ್ತು ಬೆಂಗಳೂರು ಮಧ್ಯೆ ಸಂಚಾರ ಮಾಡಲಿದೆ. ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಧಾರವಾಡದಲ್ಲಿ ಈ ರೈಲು ಸಂಚಾರಕ್ಕೆ ವರ್ಚುವಲ್ ಮೂಲಕ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಲಿದ್ದಾರೆ.
ಅದರ ಮುನ್ನಾ ದಿನವಾದ ಸೋಮವಾರ ಧಾರವಾಡದ ಪರಿಸರ ಸ್ನೇಹಿ ಕಲಾವಿದ ಮಂಜುನಾಥ ಹಿರೇಮಠ ಅವರು,
ವೇಸ್ಟ್ ಆದ ಥರ್ಮಕೋಲ್ ಹಾಗೂ ಫ್ಲೈವುಡ್ ಪೀಸ್ಗಳಿಂದ 3X2 ಅಳತೆಯ ವಂದೇ ಭಾರತ ರೈಲು ನಿರ್ಮಿಸಿದ್ದಾರೆ. ಅಲ್ಲದೇ ಅದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಹಸಿರು ನಿಶಾನೆ ತೋರುವ ಕಲಾಕೃತಿಯನ್ನೂ ರಚಿಸಿದ್ದಾರೆ. ಆ ಕಡೆಯಿಂದ ಈ ಕಡೆ ಧಾರವಾಡ ಬೆಂಗಳೂರು ಜಂಕ್ಷನ್ ಬೋರ್ಡ್ ಹಾಕಿ ಗಮನಸೆಳೆದಿದ್ದಾರೆ. ಈ ರೀತಿಯ ಕಲಾಕೃತಿ ರಚಿಸುವ ಮೂಲಕ ಕಲಾವಿದ ಮಂಜುನಾಥ ಹಿರೇಮಠ ಅವರು ನಾಳೆಯಿಂದ ಆರಂಭವಾಗುವ ವಂದೇ ಭಾರತ ರೈಲಿಗೆ ಶುಭಾಶಯ ಕೋರಿದ್ದಾರೆ.
ಈ ವಂದೇ ಮಾತರಂ ಪೆರಂಬೂರಿನಲ್ಲಿರುವ ಚೆನ್ನೈ ಇಂಟೆಗ್ರಲ್ ಕೋಚ್ ಫ್ಯಾಕ್ಟರಿಯಲ್ಲಿ ಈ ರೈಲು ನಿರ್ಮಾಣ ಮಾಡಲಾಗಿದೆ . ಬೆಂಗಳೂರು–ಧಾರವಾಡದ ಅಂತರ 487 ಕಿಲೋಮೀಟರ್ ಇದ್ದು, ಸುಮಾರು ಏಳು ಗಂಟೆಗಳಲ್ಲಿ ಕ್ರಮಿಸಲಿದೆ. ಗಂಟೆಗೆ 160 ಕಿಲೋ ಮೀಟರ್ ವೇಗದ ಸಾಮರ್ಥ್ಯ ಇದ್ದರೂ ಈ ಮಾರ್ಗದಲ್ಲಿ ಗಂಟೆಗೆ 120 ಕಿಲೋ ಮೀಟರ್ ವೇಗದಲ್ಲಿ ಚಲಿಸಲಿದೆ. ತಿರುವುಗಳು ಹೆಚ್ಚಿರುವುದು ವೇಗ ಕಡಿಮೆಯಾಗಲು ಕಾರಣ.
ವಾರಕ್ಕೆ ಆರುದಿನ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ 8ನೇ ಫ್ಲಾಟ್ಫಾರ್ಮ್ನಿಂದ ಹೊರಡುವ ‘ವಂದೇ ಭಾರತ್’ ರೈಲು ಧಾರವಾಡ ತಲುಪುವ ಮಧ್ಯೆ ಯಶವಂತಪುರ, ದಾವಣಗೆರೆ, ಹುಬ್ಬಳ್ಳಿಯಲ್ಲಿ ನಿಲ್ಲಲಿದೆ. ರೈಲು ಅಪಘಾತಗಳನ್ನು ತಪ್ಪಿಸುವ ತಂತ್ರಜ್ಞಾನವನ್ನು 2022ರಲ್ಲಿ ಅಭಿವೃದ್ಧಿ ಪಡಿಸಲಾಗಿದೆ. ‘ಕವಚ್’ ಎಂಬ ಈ ತಂತ್ರಜ್ಞಾನವು ಎದುರಿನಿಂದ ರೈಲು ಬರುತ್ತಿದ್ದರೆ ಅದರ ಮುನ್ಸೂಚನೆಯನ್ನು ಮೊದಲೇ ನೀಡುತ್ತದೆ. ಇದರಿಂದ ಮುಂದಾಗುವ ಅನಾಹುತ ತಪ್ಪಲಿದೆ. ಈ ತಂತ್ರಜ್ಞಾನವನ್ನು ‘ವಂದೇ ಮಾತರಂ’ನಲ್ಲಿ ಅಳವಡಿಸಲಾಗಿದೆ.
ಪೂರ್ಣ ಹವಾನಿಯಂತ್ರಿತ ವ್ಯವಸ್ಥೆ ಇರುವ ಈ ಸೆಮಿ ಎಕ್ಸ್ಪ್ರೆಸ್ ವಿಶೇಷ ರೈಲಿನಲ್ಲಿ 8 ಕೋಚ್ಗಳು, ಎರಡು ಮೋಟರ್ ಕಾರುಗಳಿವೆ. ಜಿಪಿಎಸ್ ವ್ಯವಸ್ಥೆ ಇರುವುದರಿಂದ ರೈಲು ಎಲ್ಲಿದೆ ಎಂಬುದನ್ನು ನೋಡಲು ಸಾಧ್ಯ. ಮೆಟ್ರೋದಲ್ಲಿ ಇರುವಂತೆ ಈ ರೈಲಿನಲ್ಲಿ ಯಾವ ನಿಲ್ದಾಣಕ್ಕೆ ತಲುಪುತ್ತಿದೆ ಎಂಬ ಮಾಹಿತಿ ಪ್ರದರ್ಶನಗೊಳ್ಳಲಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ವೈಫೈ, ಇನ್ಫೋಟೆಕ್ ವ್ಯವಸ್ಥೆಯನ್ನೂ ಅಳವಡಿಸಲಾಗಿದೆ.
ನೈರುತ್ಯ ರೈಲ್ವೆಯಲ್ಲಿ ಇದೇ ಪ್ರಥಮ ಬಾರಿಗೆ ‘ವಂದೇ ಭಾರತ್’ ರೈಲು ಕುರಿತು ಜನರಲ್ಲಿ ಸ್ವಲ್ಪ ಮಟ್ಟಿಗೆ ಜಾಗೃತಿ ಮೂಡಿಸಲಾಗಿದೆ. ಆದರೆ ಇದರ ಸಂಪೂರ್ಣವಾದ ಚಿತ್ರಣವನ್ನು ಕಲಾವಿದ ಮಂಜುನಾಥ ಹಿರೇಮಠ ತಮ್ಮ ಕಲೆಯ ಮೂಲಕ ಜನರ ಮುಂದೆ ಇರಿಸಿದ್ದು ಮಂಜುನಾಥ ಹಿರೇಮಠ ತಮ್ಮ ಕಲೆಯ ಕುರಿತು ಹೇಳುವುದು ಹೀಗೆ. ಏನೆ ಆಗಲಿ ಕಲಾವಿದ ಮಂಜುನಾಥ ಹಿರೇಮಠ ರಾಷ್ಟ್ರದ ಹಿತ ಜನ ಹಿತ ಹಾಗೂ ಸಾಮಾಜಿಕ ಕಳಕಳಿವುಳ್ಳ ಕಲೆಯ ಮೂಲಕ ಜನಮಾನಸಕ್ಕೆ ಇಳಿದ್ದಾರೆ.