ನವದೆಹಲಿ ;- ಆಗ್ನೇಯ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ 1000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಖಾಲಿ ಇರುವ ಹುದ್ದೆಗಳಿಗೆ ಜುಲೈ 22 ರಿಂದ ಅರ್ಜಿಗಳು ಪ್ರಾರಂಭವಾಗಿವೆ.
820 ಅಸಿಸ್ಟೆಂಟ್ ಲೋಕೋ ಪೈಲಟ್, 132 ಟೆಕ್ನಿಷಿಯನ್, 64 ಜೂನಿಯರ್ ಎಂಜಿನಿಯರ್ ಹುದ್ದೆಗಳು ಖಾಲಿ ಇವೆ. ಎಲ್ಲಾ ನೇಮಕಾತಿಗಳನ್ನು ಸಾಮಾನ್ಯ ಇಲಾಖಾ ಸ್ಪರ್ಧಾತ್ಮಕ ಪರೀಕ್ಷೆ (ಜಿಡಿಸಿಇ) ಕೋಟಾದಡಿ ಭರ್ತಿ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ, ಗರಿಷ್ಠ 42 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಯ ಅಂತಿಮ ಆಯ್ಕೆ ದಾಖಲೆ ಪರಿಶೀಲನೆಯ ನಂತರ ನಡೆಯಲಿದೆ.