ಬೆಂಗಳೂರು: ಕನ್ನಡ ಬಿಗ್ ಬಾಸ್ ಇತಿಹಾಸದಲ್ಲಿ ಹಿಂದೆಂದೂ ನಡೆಯದ ಘಟನೆ ದಸರಾ ಹಬ್ಬದ ಸಂಭ್ರಮದ ಮಧ್ಯೆ ನಡೆದುಹೋಗಿದೆ. ಕೊರಳಲ್ಲಿ ಧರಿಸಿದ ಚಿನ್ನದ ಸರದಲ್ಲಿ ಹುಲಿ ಉಗುರು ಧರಿಸಿದ್ದ ಆರೋಪದ ಮೇಲೆ ರೈತನ ಇಮೇಜ್ ಹೊತ್ತುಕೊಂಡು ಬಿಗ್ ಬಾಸ್ ಮನೆಯೊಳಗೆ ಪ್ರವೇಶಿಸಿ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ನನ್ನು ಅರಣ್ಯಾಧಿಕಾರಿ ಮತ್ತು ಪೊಲೀಸರು ಬಂಧಿಸಿದ್ದಾರೆ.
ಸದ್ಯ ಬಿಗ್ ಬಾಸ್ ಮನೆಯಿಂದ ಸಂತೋಷ್ ಅವರನ್ನು ಕರೆತಂದಿರುವ ರಾಮೋಹಳ್ಳಿ ಅರಣ್ಯಾಧಿಕಾರಿಗಳು ಸದ್ಯ ಪೊಲೀಸ್ ಕಸ್ಟಡಿಯಲ್ಲಿ ತೀವ್ರ ವಿಚಾರಣೆ ಎದುರಿಸುತ್ತಿದ್ದಾರೆ. ಸದ್ಯ ವರ್ತೂರು ಸಂತೋಷ್ ಅವರ ವೈದ್ಯಕೀಯ ಪರೀಕ್ಷೆ ಮುಕ್ತಾಯವಾಗಿದ್ದು, ಇನ್ನು ಸದ್ಯದಲ್ಲಿಯೇ ನ್ಯಾಯಾಧೀಶರ ಮುಂದೆ ವಿಚಾರಣೆಗೆ ಹಾಜರುಪಡಿಸಲಿದ್ದಾರೆ.
ವನ್ಯಜೀವಿ ಕಾಯ್ದೆ ಏನು ಹೇಳುತ್ತದೆ?: ಸಂತೋಷ್ ಅವರು ಯಾರಿಂದ ಹುಲಿ ಉಗುರು ಪಡೆದುಕೊಂಡರು ಎನ್ನುವ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಒಂದು ವೇಳೆ ಹುಲಿ ಉಗುರು ಒರಿಜಿನಲ್ ಆಗಿದ್ದು, ತಪ್ಪು ಮಾಡಿರುವುದು ಸಾಬೀತಾದರೆ ಕಠಿಣ ಶಿಕ್ಷೆ ಎದುರಿಸಬೇಕಾಗುತ್ತದೆ. ಇಂದು ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಅವರನ್ನು ಹಾಜರುಪಡಿಸಲಾಗುತ್ತದೆ. ಅವರ ಬಳಿ ಇರುವುದು ಒರಿಜನ್ ಹುಲಿ ಉಗುರು ಎಂದು ಕೋರ್ಟ್ ನಲ್ಲಿ ಸಾಬೀತು ಆದರೆ, ಮೂರರಿಂದ ಏಳು ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗುತ್ತದೆ.
ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಅಡಿಯಲ್ಲಿ ಸಂತೋಷ್ ಅವರ ಬಂಧನ ಆಗಿದೆ. ಆರೋಪ ಸಾಬೀತಾದರೆ 3ರಿಂದ 7 ವರ್ಷಗಳವರೆಗೆ ಶಿಕ್ಷೆ ಆಗುತ್ತದೆ. 10,000ರಿಂದ 25,000ದವರೆಗೆ ದಂಡ ವಿಧಿಸುವ ಸಾಧ್ಯತೆ ಇದೆ