PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಸ್ಕಾಟ್ಲ್ಯಾಂಡ್ ಪ್ರಧಾನ ಮಂತ್ರಿಯಾಗಿ ಪಾಕ್ ಮೂಲದ ಹಂಝಾ ಯೂಸುಫ್‌ ನೇಮಕ

March 29, 2023

ಕ್ಷಮೆ ಕೇಳದಿದ್ದರೆ ರಾಹುಲ್ ಗಾಂಧಿ ವಿರುದ್ಧ ಮತ್ತೊಂದು FIR ದಾಖಲಿಸುತ್ತೇನೆ: ರಂಜಿತ್ ಸಾವರ್ಕರ್

March 29, 2023

Code Of conduct: ಮಾಜಿ ಸಿಎಂ ಸಿದ್ದರಾಮಯ್ಯ ನೀತಿ ಸಂಹಿತೆ ಉಲ್ಲಂಘಿಸಿದ್ರಾ?! ಏನ್ ಹೇಳಿದ್ರು ಸಿದ್ದು!

March 29, 2023
Facebook Twitter Instagram
Thursday, March 30
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ವರುಣ್ ಹಾಗೂ ಭರತ್ ಚೊಚ್ಚಲ ಕನಸು ‘ಕಡಲತೀರದ ಭಾರ್ಗವ’ ಈ ವಾರ ತೆರೆಗೆ
ಚಲನಚಿತ್ರ Prajatv KannadaBy Prajatv KannadaMarch 1, 2023

ವರುಣ್ ಹಾಗೂ ಭರತ್ ಚೊಚ್ಚಲ ಕನಸು ‘ಕಡಲತೀರದ ಭಾರ್ಗವ’ ಈ ವಾರ ತೆರೆಗೆ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಉತ್ಸಾಹಿ ಯುವಕರ ತಂಡದಿಂದ ಮೂಡಿಬಂದಿರುವ ‘ಕಡಲತೀರದ ಭಾರ್ಗವ’ ಚಿತ್ರದ ಟ್ರೇಲರ್ ಮತ್ತು ಹಾಡುಗಳು ಈಗಾಗಲೇ ಪ್ರೇಕ್ಷಕರ ಗಮನ ಸೆಳೆದಿವೆ. ಈಗ ಚಿತ್ರವು ಇದೇ ಮಾರ್ಚ್ 03ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
‘ಕಡಲತೀರದ ಭಾರ್ಗವ’ ಎಂದರೆ ಮೊದಲಿಗೆ ನೆನಪಿಗೆ ಬರುವುದು ಡಾ. ಶಿವರಾಮ ಕಾರಂತರು. ಕನ್ನಡ ನಾಡಿನಲ್ಲಿ ಅವರು ‘ಕಡಲತೀರದ ಭಾರ್ಗವ’ ಎಂಬ ಬಿರುದಿನಿಂದಲೇ ಅವರು ಪ್ರಸಿದ್ಧರಾದವರು. ಆದರೆ, ಅವರಿಗೂ, ಈ ಚಿತ್ರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ, ಇದು ಅವರ ಜೀವನದ ಕಥೆಯಲ್ಲ ಎನ್ನುತ್ತಾರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡಿರುವ ಪನ್ನಗ ಸೋಮಶೇಖರ್.


ಈ ಕುರಿತು ಮಾತನಾಡುವ ಅವರು, ‘ಕಡಲು ಎಂದರೆ ಅಂತ್ಯವಿಲ್ಲದ್ದು ಅಥವಾ ಅನಂತ ಎಂದರ್ಥ. ಆ ಕಡಲನ್ನು ನಮ್ಮ ಚಿತ್ರದಲ್ಲಿ ಒಂದು ವಿಷಯಕ್ಕೆ ಹೋಲಿಸಿದ್ದೇನೆ. ಇನ್ನು, ಭಾರ್ಗವರಾಮ ಅಥವಾ ಪರಶುರಾಮ ಎನ್ನುವುದು ನಮ್ಮ ಪುರಾಣಗಳಲ್ಲಿ ಬರುವ ಒಂದು ಪವರ್ಫುಲ್ ಪಾತ್ರ. ಇಲ್ಲಿ ನಾಯಕ ಭಾರ್ಗವ, ಪರಶುರಾಮನ ಗುಣಲಕ್ಷಣಗಳನ್ನು ಹೊಂದಿರುತ್ತಾನೆ. ಏನೇ ಆದರೂ ಗುರಿ ಸಾಧಿಸುತ್ತೇನೆ ಎಂಬ ಛಲದಿಂದ ಮುನ್ನಡೆಯುತ್ತಿರುತ್ತಾನೆ. ಹಾಗಾಗಿ, ಚಿತ್ರಕ್ಕೆ ‘ಕಡಲತೀರದ ಭಾರ್ಗವ’ ಎಂದು ಹೆಸರಿಟ್ಟಿದ್ದೇವೆ. ಇದೊಂದು ಸೈಕಲಾಜಿಕಲ್ ಥ್ರಿಲ್ಲರ್ ಚಿತ್ರವಾಗಿದ್ದು, ಡಾ. ಶಿವರಾಮ ಕಾರಂತರಿಗೂ ಯಾವುದೇ ಸಂಬಂಧವಿಲ್ಲ. ಅವರಿಗೆ ಧಕ್ಕೆ ತರುವಂತಹ ಯಾವುದೇ ಕೆಲಸವನ್ನೂ ಮಾಡಿಲ್ಲ. ಈಗಾಗಲೇ ಚಿತ್ರವನ್ನು ಹಲವರಿಗೆ ತೋರಿಸಿದ್ದೇವೆ. ಚಿತ್ರ ನೋಡಿದವರೆಲ್ಲರೂ ಮೆಚ್ಚಿಕೊಂಡಿದ್ದಾರೆ. ಶೀರ್ಷಿಕೆಗೆ ನ್ಯಾಯ ಸಲ್ಲಿಸಿದ್ದೇನೆ ಎಂದು ಅಭಿಪ್ರಾಯ ಪಟ್ಟಿದ್ದಾರೆ’ ಎನ್ನುತ್ತಾರೆ ಪನ್ನಗ ಸೋಮಶೇಖರ್.

 

‘ಒಬ್ಬ ಮನುಷ್ಯನಲ್ಲಿ ಎಲ್ಲ ತರಹದ ಭಾವನೆಗಳಿರುತ್ತವೆ. ಆ ಎಮೋಷನ್ಗಳನ್ನು ಇಟ್ಟುಕೊಂಡು ಮಾಡಿರುವ ಕಥೆಯೇ ‘ಕಡಲತೀರದ ಭಾರ್ಗವ’’ ಎನ್ನುತ್ತಾರೆ ಚಿತ್ರದ ನಾಯಕರಲ್ಲೊಬ್ಬರಾದ ವರುಣ್ ರಾಜು. ‘ಚಿತ್ರದ ಟ್ರೇಲರ್ಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಟ್ರೇಲರ್ ನೋಡಿದವರೆಲ್ಲ, ಬಹಳ ಗ್ರಿಪ್ಪಿಂಗ್ ಆಗಿದೆ, ಕಥೆ ಗೊತ್ತಾಗುತ್ತಿಲ್ಲ, ಹೊಸಬರೇ ಸೇರಿ ಈ ಚಿತ್ರ ಮಾಡಿದ್ದು ಎಂದನಿಸುತ್ತಿಲ್ಲ ಎಂದು ಹೇಳುತ್ತಿದ್ದಾರೆ. ನಾಳೆ ಚಿತ್ರ ನೋಡುವ ಪ್ರೇಕ್ಷಕರು ಸಹ ಇದೇ ಅಭಿಪ್ರಾಯಪಟ್ಟರೆ ನಮ್ಮ ಶ್ರಮ ಸಾರ್ಥಕ’ ಎನ್ನುತ್ತಾರೆ ವರುಣ್.

ಈಗಾಗಲೇ ‘ಕಡಲತೀರದ ಭಾರ್ಗವ’ ಚಿತ್ರದ ಮೊದಲ ಟಿಕೆಟ್ ದಾಖಲೆಯ ಎರಡೂವರೆ ಲಕ್ಷ ರೂ.ಗಳಿಗೆ ಹರಾಜಿನಲ್ಲಿ ಮಾತಾಟವಾಗಿದೆ. ನಾಯಕ ವರುಣ್ ರಾಜು ಅವರ ಸಂಬಂಧಿಯೂ ಆದ ಮೋಹನ್ ರಾಜು ದುಡ್ಡು ಕೊಟ್ಟು ಮೊದಲ ಟಿಕೆಟ್ ಪಡೆದಿದ್ದಾರೆ.


‘ಕಡಲತೀರದ ಭಾರ್ಗವ’ ಚಿತ್ರದ ಹಿಂದೆ ಉತ್ಸಾಹಿ ಯುವಕರ ತಂಡವಿದ್ದು, ಈ ಚಿತ್ರವನ್ನು ಎವ ಕಲಾ ಸ್ಟುಡಿಯೋಸ್ನಡಿ ವರುಣ್ ರಾಜು ಮತ್ತು ಭರತ್ ಗೌಡ ಜಂಟಿಯಾಗಿ ನಿರ್ಮಿಸಿದ್ದಾರೆ. ಭರತ್ ಗೌಡ, ಶ್ರುತಿ ಪ್ರಕಾಶ್, ವರುಣ್ ರಾಜು, ರಾಘವ್ ನಾಗ್, ಕೆ.ಎಸ್. ಶ್ರೀಧರ್, ಅಶ್ವಿನ್ ಹಾಸನ್ ಮುಂತಾದವರು ನಟಿಸಿರುವ ಈ ಚಿತ್ರಕ್ಕೆ ಅನಿಲ್ ಸಿ.ಜೆ. ಅವರ ಸಂಗೀತ ಮತ್ತು ಕೀರ್ತನ್ ಪೂಜಾರಿ ಛಾಯಾಗ್ರಹಣವಿದೆ.

 

Share. Facebook Twitter WhatsApp Pinterest LinkedIn Tumblr Telegram Email

Related Posts

‘ಐಟಂ ಸಾಂಗ್ ಬೇಡ, ಮನೆಯಲ್ಲೇ ಇರು ಎಂದಿದ್ದರು: ವಿಚ್ಛೇದನದ ದಿನಗಳನ್ನು ನೆನಪಿಸಿಕೊಂಡ ನಟಿ ಸಮಂತಾ

March 29, 2023

ಪ್ರಭುದೇವ ಹುಟ್ಟಿದ್ದು ಅಮಾವಾಸ್ಯೆ ದಿನ: ಮೂಗೂರ್‌ ಸುಂದರ್‌

March 29, 2023

ಲಂಡನ್ ನಲ್ಲಿ ಶೋಭಿತಾ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ನಾಗಚೈತನ್ಯ

March 29, 2023

ಸಂಭಾವನೆಗಾಗಿ ಯಾವತ್ತು ಬೇಡಬಾರದು: ನಟಿ ಸಮಂತಾ

March 29, 2023

ಅಂಬರೀಶ್ ಯಾರ ಬಳಿಯೂ ಕೈಚಾಚಿದವರಲ್ಲ ಆದರೆ ಸ್ಮಾರಕ್ಕಾಗಿ ಸುಮಲತಾ ಕೈಚಾಚಿದರು: ನಟ ಚೇತನ್

March 29, 2023

ಪ್ರಿಯಾಂಕಾ ಬಾಲಿವುಡ್ ಬಿಡೋಕೆ ಕರಣ್ ಜೋಹಾರ್ ಕಾರಣ: ಕಂಗನಾ ರಣಾವತ್

March 29, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.