ದಕ್ಷಿಣ ಕನ್ನಡ: ರಾಜ್ಯದಲ್ಲಿ ಮಳೆರಾಯನ ಆರ್ಭಟ ಸದ್ಯಕ್ಕೆ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಹವಾಮಾನ ಇಲಾಖೆ ಈಗಾಗಲೇ ಹೇಳಿದಂತೆ ಆಗಷ್ಟ್ 2ನೇ ವಾರದ ತನಕವೂ ಮಳೆಯ ಅಬ್ಬರ ಹೀಗೆ ಮುಂದುವರಿಯಲಿದೆ. ಇತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರಣುದೇವ ವಿಶ್ರಾಂತಿ ಪಡೆಯದೇ ಒಂದೇ ಸಮನೆ ಸುರಿಯುತ್ತಿದ್ದಾನೆ. ಹೀಗಾಗಿ ದಕ್ಷಿಣ ಕನ್ನಡದಲ್ಲಿಂದು ರೆಡ್ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ಐದು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ
ಇದರ ಜೊತೆಗೆ ರಾಜ್ಯದ ಐದು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮತ್ತೊಂದು ಕಡೆ ಬೆಳಗಾವಿಯಲ್ಲಿಯೂ ವರುಣಾರ್ಭಟ ಮುಂದುವರಿದಿದ್ದು. ಜಿಲ್ಲೆಯಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಇಂದು ಬೆಂಗಳೂರಿನಲ್ಲಿಯೂ ಸಂಜೆ ಹೊತ್ತಿಗೆ ಮಳೆರಾಯ ಎಂಟ್ರಿ ಕೊಡುವ ಸಾಧ್ಯತೆ ಇದ್ದು ನಗರದ ಕೆಲ ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆಯೆಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.