ಕನ್ನಡ ಸ್ಟಾರ್ ಜೋಡಿ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ದಂಪತಿ ದೀಪಾವಳಿಯಂದು ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಪೋಷಕರಾಗುತ್ತಿರುವ ಸಿಹಿಸುದ್ದಿಯನ್ನು ಜೋಡಿ ಸೋಶಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ.
ಈ ಶುಭ ದಿನದಂದು ನಿಮ್ಮೆಲ್ಲರೊಡನೆ ಶುಭ ಸುದ್ದಿಯೊಂದನ್ನು ಹಂಚಿಕೊಳ್ಳುವಾಸೆ ನಮ್ಮದು. ನಿಮ್ಮಲ್ಲಿ ಬಹುತೇಕರು ಊಹಿಸಿದ್ದು ಸರಿಯೇ. ಹೌದು, ನಾವು ನಮ್ಮ ‘ಕುಡಿ’ಗಾಗಿ ಎದುರು ನೋಡುತ್ತಿದ್ದೇವೆ. ನಿಮ್ಮೆಲ್ಲರ ಹಾರೈಕೆ, ಆರ್ಶಿವಾದಗಳ ನಿರೀಕ್ಷೆಯಲ್ಲಿ ಎಂದು ಸೋಷಿಯಲ್ ಮೀಡಿಯಾದಲ್ಲಿ ವಸಿಷ್ಠ ಸಿಂಹ ದಂಪತಿ ಅಧಿಕೃತವಾಗಿ ತಿಳಿಸಿದ್ದಾರೆ. ಈ ಜೋಡಿಗೆ ಸೆಲೆಬ್ರಿಟಿಗಳು, ಅಭಿಮಾನಿಗಳು ಗುಡ್ ನ್ಯೂಸ್ ನೀಡಿದ್ದಾರೆ.
ಇನ್ನೂ ಡಾಲಿ ಮತ್ತು ವಸಿಷ್ಠ ಸಿಂಹ ಹಲವು ವರ್ಷಗಳಿಂದ ಸ್ನೇಹಿತರು. ಇಂದು (ನ.1) ಡಾಲಿ ಅವರು ಭಾವಿ ಪತ್ನಿಯನ್ನು ಪರಿಚಯಿಸಿ ಮದುವೆ ಡೇಟ್ ಅನೌನ್ಸ್ ಮಾಡಿದ್ದಾರೆ. ಈ ಬೆನ್ನಲ್ಲೇ, ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಗುಡ್ ನ್ಯೂಸ್ ನೀಡಿದ್ದಾರೆ ವಸಿಷ್ಠ ಸಿಂಹ ದಂಪತಿ.
ಅಂದಹಾಗೆ, ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಕಳೆದ ವರ್ಷ ಜನವರಿ 26ರಂದು ಮೈಸೂರಿನಲ್ಲಿ ಹಸೆಮಣೆ ಏರಿದ್ದರು. ಹಲವು ವರ್ಷಗಳ ಪ್ರೀತಿಗೆ ಮದುವೆಯ ಮುದ್ರೆ ಒತ್ತಿದ್ದರು.ಇದೀಗ ಮೊದಲ ಮಗುವನ್ನು ಬರಮಾಡಿಕೊಳ್ಳುವ ಸಂಭ್ರಮದಲ್ಲಿದ್ದಾರೆ.