ಬೆಂಗಳೂರು:– ವೈಕುಂಠ ಏಕಾದಶಿ ಹಿನ್ನೆಲೆ ದೇವಸ್ಥಾನಗಳಿಗೆ ಭಕ್ತರ ದಂಡೇ ಹರಿದು ಬರುತ್ತಿದ್ದು, ಬೆಂಗಳೂರಿನ ಹಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ ವಿಧಿಸಲಾಗಿದೆ.
ಬೆಂಗಳೂರಿನ ಕೋಟೆ ವೆಂಕಟರಮಣಸ್ವಾಮಿ ದೇವಸ್ಥಾನ, ತಿರುಮಲಗಿರಿ ಲಕ್ಷ್ಮಿ ವೆಂಕಟೇಶ್ವರಸ್ವಾಮಿ ದೇವಸ್ಥಾನ ಮತ್ತು ಇಸ್ಕಾನ್ ದೇವಸ್ಥಾನಕ್ಕೆ ಸಹಸ್ರಾರು ಭಕ್ತರು ನಸುಕಿನ ಜಾವದಿಂದಲೇ ಭೇಟಿ ನೀಡುತ್ತಿದ್ದಾರೆ. ಇದರಿಂದ, ದೇವಸ್ಥಾನದ ಅಕ್ಕ-ಪಕ್ಕದ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗದಂತೆ ಮುಂಜಾಗ್ರತಾ ಕ್ರಮವಾಗಿ ವಾಹನ ಸಂಚಾರವನ್ನು ಬೆಳಗ್ಗೆ 6 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ನಿಷೇಧ ಮಾಡಲಾಗಿದೆ.
ಈ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ:-
ಕೆ.ಆರ್.ಪುರ ಕಾ ಮತ್ತು ಸು ಪೊಲೀಸ್ ಠಾಣೆ ರಸ್ತೆ
ರಾಮಮೂರ್ತಿನಗರ ಮುಖ್ಯರಸ್ತೆಯಿಂದ ಕಲ್ಕೆರೆ ಕಡೆಗೆ ಹೋಗುವ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
ಪರ್ಯಾಯ ಮಾರ್ಗ:
ಕೆ.ಆರ್.ಪುರ ಗ್ರಾಮದ ಒಳಗೆ ಹೋಗುವ ವಾಹನ ಸವಾರರು ಜಿ.ಆರ್.ಟಿ. ಕ್ರಾಸ್ ಮತ್ತು ಸರ್ಕಾರಿ ಕಾಲೇಜ್ ರಸ್ತೆ ಮೂಲಕ ಸಂಚರಿಸಬಹುದಾಗಿದೆ.
ಕಲ್ಕೆರೆ ಕಡೆ ಹೋಗುವ ಮತ್ತು ಬರುವ ವಾಹನ ಸವಾರರು ರಾಮಮೂರ್ತಿನಗರ ಹಳೆ ಪೋಸ್ಟ್ ಆಫೀಸ್ ರಸ್ತೆ ಮೂಲಕ ಸಂಚರಿಸಬಹುದಾಗಿದೆ.
ಜೆ.ಪಿ ನಗರದ ಶ್ರೀ.ತಿರುಮಲಗಿರಿ ಲಕ್ಷ್ಮಿ ವೆಂಕಟೇಶ್ವರಸ್ವಾಮಿ ದೇವಸ್ಥಾನಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು ತೆರಳುತ್ತಿದ್ದಾರೆ. ಹೀಗಾಗಿ ಪಾದಚಾರಿಗಳ ಹಾಗೂ ವಾಹನ ಸವಾರರ ಸುಗಮ ಸಂಚಾರದ ಹಿತದೃಷ್ಟಿಯಿಂದ ಈ ರಸ್ತೆಗಳಲ್ಲಿ ಸಂಚಾರ ಮಾರ್ಪಾಡು ಮಾಡಲಾಗಿರುತ್ತದೆ.