ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಬಹುತೇಕ ಆಯ್ಕೆ ಖಚಿತವಾಗಿದೆ. ಡಿಕೆ ಶಿವಕುಮಾರ್ ಉಪ ಮುಖ್ಯಮಂತ್ರಿ ಪಟ್ಟ ದೊರೆತಿದೆ. ಇದು ಇಂದು ಸಂಜೆ 7ಕ್ಕೆ ಬೆಂಗಳೂರಿನಲ್ಲಿ ನಡೆಯುವಂತ ಶಾಸಕಾಂಗ ಪಕ್ಷದ ಸಭೆಯಲ್ಲಿ ಫೈನಲ್ ಆಗಿ ಅಧಿಕೃತ ಘೋಷಣೆಯಾಗಲಿದೆ. ಅದಕ್ಕೂ ಮುನ್ನ ಇಂದು ಬೆಳಿಗ್ಗೆ 9.30ಕ್ಕೆ ದೆಹಲಿಯಲ ಕೆ.ಸಿ ವೇಣುಗೋಪಾಲ್ ನಿವಾಸದಲ್ಲಿ ಸಿಎಂ ಗದ್ದುಗೆ ಗುದ್ದಾಟ ಶಮನಕ್ಕೆ ಬ್ರೇಕ್ ಹಾಕಲು ಬ್ರೇಕ್ ಫಾಸ್ಟ್ ಮೀಟಿಂಗ್ ಅರೆಂಜ್ ಮಾಡಲಾಗಿದೆ.
ವೇಣುಗೋಪಾಲ್ ನಿವಾಸದಲ್ಲಿ ನಡೆಯುತ್ತಿರುವಂತ ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ವಿಶೇಷ ಆಹ್ವಾನವನ್ನು ನೀಡಲಾಗಿದೆ. ಡಿಕೆಶಿ ಹಾಗೂ ಸಿದ್ಧರಾಮಯ್ಯಗೆ ವಿಶೇಷ ಆಹ್ವಾನವನ್ನು ನೀಡಲಾಗಿದೆ. ಈ ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಭಾಗಿಯಾಗಲಿರುವಂತ ನಾಯಕರೊಂದಿಗೆ ಕಾಂಗ್ರೆಸ್ ನಾಯಕರು ಅಂತಿಮ ಚರ್ಚೆ ನಡೆಸಿ, ಕರ್ನಾಟಕದ ಮುಂದಿನ ಸಿಎಂ ಹುದ್ದೆಗಾಗಿ ನಡೆಯುತ್ತಿರುವಂತ ಗುದ್ದಾಟಕ್ಕೆ ಬ್ರೇಕ್ ಕೂಡ ಹಾಕಲಿದ್ದಾರೆ ಎನ್ನಲಾಗುತ್ತಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ನಿವಾಸದಲ್ಲಿ ನಡೆಯುತ್ತಿರುವಂತ ಇಂದು ಬೆಳಿಗ್ಗೆಯ ಉಪಹಾರ ಕೂಟವು ತೀವ್ರ ಕುತೂಹಲ ಕೆರಳಿಸಿದೆ. ಈ ಮೀಟಿಂಗ್ ನಲ್ಲಿ ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಅವರನ್ನು ನಾಯಕರು ಮನವೊಲಿಸಿ, ಕರ್ನಾಟಕದ ಸಿಎಂ ಹೆಸರು ಸಂಜೆ ಸಿಎಲ್ ಪಿ ಸಭೆಯಲ್ಲಿ ಘೋಷಣೆ ಮಾಡುವಂತೆ ಮಾಡಲಿದ್ದಾರೆ. ಅಲ್ಲಿಯವರೆಗೆ ಕಾದು ನೋಡಬೇಕಿದೆ.