ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಿ ‘ಸಿದ್ದರಾಮಯ್ಯ’, ಉಪಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಆಯ್ಕೆ ಆಗಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ (AICC General Secretary Venugopal)ಘೋಷಣೆ ಮಾಡಿದ್ದಾರೆ. ಇಂದು ದೆಹಲಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಿ ‘ಸಿದ್ದರಾಮಯ್ಯ’ ಆಯ್ಕೆ ಆಗಿದ್ದಾರೆ, ಉಪಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಘೋಷಣೆ ಮಾಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಗೆಲುವಿನ ಕ್ರೆಡಿಟ್ ಸೋನಿಯಾ ಗಾಂಧಿ, ರಾಹುಲ್ ಗಾಂ, ಪ್ರಿಯಾಂಕಾ ಗಾಂಧಿ ಸೇರಿದಂತೆ ಎಲ್ಲಾ ಕಾಂಗ್ರೆಸ್ ನಾಯಕರಿಗೆ ಸಲ್ಲುತ್ತದೆ ಎಂದು ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಹೇಳಿದ್ದಾರೆ. ಭಾರತ್ ಜೋಡೋ ಪಾದಯಾತ್ರೆ ಬಳಿಕ ಕಾಂಗ್ರೆಸ್ ಗೆದ್ದಿದೆ. ಸಿದ್ದರಾಮಯ್ಯ ಡಿಕೆಶಿ ಪ್ರಬಲ ನಾಯಕರು. ಕಾಂಗ್ರೆಸ್ ಎನ್ನುವುದು ಪ್ರಜಾಪ್ರಭುತ್ವದ ಪಕ್ಷ ಎಂದು ಹೇಳಿದರು.