ಬೆಂಗಳೂರು: ರಾಜ್ಯದಲ್ಲಿ ಭಾರೀ ವಿವಾದ ಸೃಷ್ಟಿ ಮಾಡಿದ್ದ ಉಡುಪಿಯ ನೇತ್ರಜ್ಯೋತಿ ಕಾಲೇಜಿನ (Udupi College) ಪ್ರಕರಣ ಸಂಬಂಧ ಉಡುಪಿ ಕೋರ್ಟ್ಗೆ ಸಿಐಡಿ ದೋಷಾರೋಪ ಪಟ್ಟಿ ಸಲ್ಲಿಸಿದೆ.
ಉಡುಪಿಯ ನೇತ್ರಜ್ಯೋತಿ ಕಾಲೇಜಿನ ಟಾಯ್ಲೆಟ್ನಲ್ಲಿ ಮೂವರು ವಿದ್ಯಾರ್ಥಿನಿಯರು ತನ್ನ ಸಹಪಾಠಿಯ ಫೋಟೋ ತೆಗೆದಿದ್ರು ಎಂಬ ಆರೋಪ ಕೇಳಿಬಂದಿತ್ತು. ಈ ವಿಚಾರದಲ್ಲಿ ಬಿಜೆಪಿ ದೊಡ್ಡಮಟ್ಟದ ಹೋರಾಟ ನಡೆಸಿತ್ತು. ಬಳಿಕ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿತ್ತು.
ಇದೀಗ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಸಿಐಡಿ ಇಂದು ನ್ಯಾಯಾಲಯಕ್ಕೆ ಚಾರ್ಜ್ಶೀಟ್ (Charge Sheet) ಸಲ್ಲಿಸಿದೆ. 1,100 ಪುಟಗಳ ದೋಷಾರೋಪ ಪಟ್ಟಿ, ವಿದ್ಯಾರ್ಥಿನಿಯರ ಹೇಳಿಕೆ, ಎಫ್ಎಸ್ಎಲ್ನ ವರದಿ ಈ ಎಲ್ಲಾ ಮಾಹಿತಿಯನ್ನು ಒಳಗೊಂಡಿದೆ.