ಉಡುಪಿ: ನಗರದ (Udupi) ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆದ ವೀಡಿಯೋ ಚಿತ್ರೀಕರಣ ವಿವಾದಕ್ಕೆ ಸಂಬಂಧಿಸಿದಂತೆ ಹುತಾತ್ಮರ ಸ್ಮಾರಕದ ಬಳಿ ಎಬಿವಿಪಿ (ABVP) ಇಂದು ಪ್ರತಿಭಟನೆ (Protest) ನಡೆಸಿದೆ. ಪ್ರಕರಣದ ವಿಚಾರವಾಗಿ ಸೂಕ್ತ ತನಿಖೆ ನಡೆಯಬೇಕು. ಅಲ್ಲದೇ ಸಂತ್ರಸ್ತ ವಿದ್ಯಾರ್ಥಿನಿಗೆ ಸೂಕ್ತ ನ್ಯಾಯ ಒದಗಿಸಿ ಕೊಡಬೇಕು ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.
ಈ ವೇಳೆ ಮಳೆಯನ್ನೂ ಲೆಕ್ಕಿಸದೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಎಸ್ಪಿ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಬೇಕು ಎಂದು ಪಟ್ಟು ಹಿಡಿದಿದ್ದು. ಸ್ಥಳಕ್ಕೆ ಎಸ್ಪಿ ಹಾಕೆ ಅಕ್ಷಯ್ ಮಚ್ಚಿಂದ್ರ ಭೇಟಿ ನೀಡಿದ್ದಾರೆ. ಈ ವೇಳೆ ಶಾಸಕ ಯಶ್ಪಾಲ್ ಸುವರ್ಣ ಅವರನ್ನು ಪೊಲೀಸರು ತಳ್ಳಾಡಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್ಪಿ ಹಾಕೆ ಅಕ್ಷಯ್ ಮಚ್ಚಿಂದ್ರ ಮಾತನಾಡಿ, ವೀಡಿಯೋ ವಿವಾದಕ್ಕೆ ತಳುಕು ಹಾಕಿ ಬೇರೆ ವೀಡಿಯೋಗಳನ್ನು ವೈರಲ್ ಮಾಡುತ್ತಿದ್ದಾರೆ. ಈ ಪ್ರಕರಣದ ವೀಡಿಯೋ ವೈರಲ್ ಆಗಿಲ್ಲ. ಮೊಬೈಲ್ ಸಂಪೂರ್ಣ ಪರಿಶೀಲನೆ ಮಾಡಲಾಗಿದ್ದು, ಯಾವ ವೀಡಿಯೋಗಳು ಸಹ ಪತ್ತೆಯಾಗಿಲ್ಲ. ಬೇರೆ ಮೊಬೈಲ್ಗಳಿದ್ದರೆ ಅವುಗಳನ್ನು ವಶಕ್ಕೆ ಪಡೆದು ಪರಿಶೀಲಿಸಲಾಗುವುದು. ಅಲ್ಲದೇ ಡಿಲೀಟ್ ಮಾಡಿದ್ದರೆ ಅವುಗಳನ್ನು ಎಫ್ಎಸ್ಎಲ್ಗೆ ಕಳುಹಿಸಿ ತನಿಖೆ ನಡೆಸಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
![Demo](https://prajatvkannada.com/wp-content/uploads/2023/08/new-Aston-Band.jpeg)