ಮುಂಬೈ: 2017ರ ಆಗಸ್ಟ್ನಲ್ಲಿ ಪರಾರಿಯಾಗಿರುವ ಉದ್ಯಮಿ ವಿಜಯ ಮಲ್ಯ ಅವರ ಆಸ್ತಿ ಮೌಲ್ಯ ₹7,500 ಕೋಟಿ ಎಂದು ಸ್ವಿಸ್ ಬ್ಯಾಂಕ್ ಅಂದಾಜಿಸಿದ್ದು, ಬ್ಯಾಂಕ್ಗಳ ಸಾಲ ತೀರಿಸಲು ಬೇಕಾದಷ್ಟು ಮೊತ್ತ ಅವರ ಬಳಿ ಇದೆ ಎಂದು ಕಿಂಗ್ಫಿಷರ್ ಏರ್ಲೈನ್ಸ್ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಮೂರನೇ ಪೂರಕ ಚಾರ್ಜ್ ಶೀಟ್ನಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ತಿಳಿಸಿದೆ.
2015-16ರ ಅವಧಿಯಲ್ಲಿ ತಮ್ಮ ಕಿಂಗ್ಫಿಷರ್ ಏರ್ಲೈನ್ಸ್ ನಗದು ಕೊರತೆಯನ್ನು ಎದುರಿಸುತ್ತಿದ್ದಾಗ ಉದ್ಯಮಿ ವಿಜಯ ಮಲ್ಯ ಇಂಗ್ಲೆಂಡ್ ಮತ್ತು ಫ್ರಾನ್ಸ್ನಲ್ಲಿ ₹ 330 ಕೋಟಿ ಮೌಲ್ಯದ ಆಸ್ತಿಯನ್ನು ಖರೀದಿಸಿದ್ದಾರೆ ಎಂದು ಸಿಬಿಐ ತಿಳಿಸಿದೆ.
₹ 900 ಕೋಟಿಗೂ ಹೆಚ್ಚು ಮೊತ್ತದ ಐಡಿಬಿಐ ಬ್ಯಾಂಕ್-ಕಿಂಗ್ಫಿಷರ್ ಏರ್ಲೈನ್ಸ್ ಸಾಲ ವಂಚನೆ ಪ್ರಕರಣದಲ್ಲಿ ವಿಜಯ ಮಲ್ಯ ಆರೋಪಿಯಾಗಿದ್ದು, ಸಿಬಿಐ ಈ ಪ್ರಕರಣದ ಆರೋಪಿಯಾಗಿದ್ದಾರೆ. ಈ ಸಂಬಂಧ ಸಿಬಿಐ ಇತ್ತೀಚೆಗೆ ಇಲ್ಲಿನ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ಪೂರಕ ಚಾರ್ಜ್ ಶೀಟ್ ಸಲ್ಲಿಸಿದ್ದು, ವಿಜಯ ಮಲ್ಯ ಅಪಾರ ಪ್ರಮಾಣದ ಆಸ್ತಿ ಹೊಂದಿದ್ದಾರೆಂದು ಇದರಲ್ಲಿ ಉಲ್ಲೇಖಿಸಲಾಗಿದೆ.
2009ರ ಅಕ್ಟೋಬರ್ನಲ್ಲಿ ₹ 150 ಕೋಟಿ ಅಲ್ಪಾವಧಿ ಸಾಲ ಮಂಜೂರಾತಿ ಮತ್ತು ವಿತರಣೆಗಾಗಿ ದಾಸ್ಗುಪ್ತಾ ಅವರು ತಮ್ಮ ಹುದ್ದೆ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಸಿಬಿಐ ತಿಳಿಸಿದೆ.