ವಿಜಯಪುರ: ಪಂಚ ಗ್ಯಾರಂಟಿಯಿಂದ ಸಚಿವರಿಗೆ ಎಲ್ಲಿ ಹಣ ತಿನ್ನಬೇಕು ಅನ್ನೋದು ಗೊತ್ತಾಗುತ್ತಿಲ್ಲ. ಗ್ಯಾರಂಟಿ ಕೊಟ್ಟ ಮೇಲೆ ಕಾಂಗ್ರೆಸ್ ಸರ್ಕಾರದ್ದೆ ಗ್ಯಾರಂಟಿ ಇಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯವಾಡಿದ್ದಾರೆ.
ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ತಿಮ್ಮಾಪುರ್ ವರ್ಗಾವಣೆ ಭ್ರಷ್ಟಾಚಾರ ವಿಚಾರವಾಗಿ,ಕಾಂಗ್ರೆಸ್ ಸರ್ಕಾರ ಎಲ್ಲಾ ಇಲಾಖೆಗಳಲ್ಲಿ ಭ್ರಷ್ಟಾಚಾರ ಮಾಡಿದೆ. ಪಂಚ ಗ್ಯಾರಂಟಿಯಿಂದ ಸಚಿವರಿಗೆ ಎಲ್ಲಿ ಹಣ ತಿನ್ನಬೇಕು ಎಂದು ಗೊತ್ತಾಗುತ್ತಿಲ್ಲ.
ಅಬಕಾರಿ ಇಲಾಖೆ ಹೊರತಾಗಿ ಸಚಿವರಿಗೆ ಮತ್ತೊಂದು ಸೋರ್ಸ್ ಇಲ್ಲ. ಅಬಕಾರಿ ಇಲಾಖೆಯ ವರ್ಗಾವಣೆಯಲ್ಲಿ ದೊಡ್ಡ ಉದ್ಯೋಗ ಹುಟ್ಟಿಕೊಂಡಿದೆ. ಏಕೆಂದರೆ ಅವರಿಗೆ ಗ್ಯಾರಂಟಿ ಇಲ್ಲ. ಗ್ಯಾರಂಟಿ ಕೊಟ್ಟ ಮೇಲೆ ಅವರ ಸರ್ಕಾರದ್ದೆ ಗ್ಯಾರಂಟಿ ಇಲ್ಲ ಎಂದು ಹೇಳಿದರು.