ಕನ್ನಡ ಚಿತ್ರರಂಗದ ನಟ ವಿನೋದ್ ರಾಜ್ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನುಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕರುಳಿನ ಸಮಸ್ಯೆಯಿಂದ ಆಸ್ಪತ್ರೆಗೆ ವಿನೋದ್ ರಾಜ್ ಅವರನ್ನು ದಾಖಲಿಸಲಾಗಿದೆ.
11 ವರ್ಷಗಳ ಹಿಂದೆ ವಿನೋದ್ ರಾಜ್ ಹಾರ್ಟ್ ಆಪರೇಷನ್ಗೆ ಒಳಗಾಗಿದ್ದರು. ಈ ವೇಳೆ, ಅವರ ಹಾರ್ಟ್ಗೆ ಸ್ಟಂಟ್ ಅಳವಡಿಸಲಾಗಿತ್ತು. ಇದೀಗ ಅದೇ ಸ್ಟಂಟ್ನಿಂದ ಕರುಳಿನ ಸಮಸ್ಯೆ ಎದುರಾಗಿದೆ. ಹಾಗಾಗಿ ಸದ್ಯ ವಿನೋದ್ ರಾಜ್ ಗೆ ಆಪರೇಷನ್ ಮಾಡಲಾಗಿದ್ದು, ಇನ್ನೇರಡು ದಿನಗಲ್ಲಿ ವಿನೋದ್ ರಾಜ್ ಡಿಸ್ಚಾರ್ಜ್ ಆಗಲಿದ್ದಾರೆ.
ಹಿರಿಯ ನಟಿ ಲೀಲಾವತಿ ಪುತ್ರ, ನಟ ವಿನೋದ್ ರಾಜ್ ತಾಯಿ ಅಗಲಿಕೆ ನಂತರ ಏಕಾಂಗಿಯಾಗಿ ವಾಸವಿದ್ದರು. ಇದೀಗ ವಿನೋದ್ ರಾಜ್ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದು, ಅಭಿಮಾನಿಗಳಲ್ಲಿ ಆತಂಕ ಹೆಚ್ಚಿಸಿದೆ.