ಬೆಂಗಳೂರು:- ನಗರದಲ್ಲಿ ಆಟೋ ಚಾಲಕರಿಂದ ನಿಯಮ ಉಲ್ಲಂಘನೆ ಹಿನ್ನೆಲೆ, ಸಂಚಾರಿ ಪೊಲೀಸರಿಂದ ಸ್ಪೆಷಲ್ ಡ್ರೈವ್ ನಡೆಸಲಾಗಿದೆ.
ದಕ್ಷಿಣ ವಿಭಾಗದ ಸಂಚಾರಿ ಪೊಲೀಸರಿಂದ ಕಾರ್ಯಾಚರಣೆ ನಡೆದಿದ್ದು, ನಿಯಮ ಉಲ್ಲಂಘನೆ ಮಾಡಿರೋ ಆಟೋ ಚಾಲಕರ ವಿರುದ್ಧ ಕೇಸ್ ದಾಖಲು ಮಾಡಲಾಗುತ್ತಿದೆ. ಇಂದು 599 ಆಟೋಗಳನ್ನ ಸಂಚಾರಿ ಪೊಲೀಸರು ತಪಾಸಣೆ ಮಾಡಿದ್ದಾರೆ.
ಈ ವೇಳೆ ಕೆಲ ಚಾಲಕರಿಂದ ನಿಯಮ ಉಲ್ಲಂಘನೆ ಹಿನ್ನೆಲೆ, 177 ಚಾಲಕರ ಮೇಲೆ ಕೇಸ್ ದಾಖಲಾಗಿದೆ. ಎಲೆಕ್ಟ್ರಾನಿಕ್ ಸಿಟಿ, ಹೆಚ್ ಎಸ್ ಆರ್ ಲೇಔಟ್, ಮಡಿವಾಳ ಸೇರಿದಂತೆ 13 ಸಂಚಾರಿ ಠಾಣೆಗಳಲ್ಲಿ ಕೇಸ್ ದಾಖಲಾಗಿದೆ.