ಸೆಂಚೂರಿಯನ್: ಟೀಂ ಇಂಡಿಯಾ ಟಾಪ್ ಕ್ಲಾಸ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಅತ್ಯುತ್ತಮ ಬ್ಯಾಟಿಂಗ್ ಫಾರ್ಮ್ನೊಂದಿಗೆ ದಾಖಲೆ ಮೇಲೆ ದಾಖಲೆಗಳನ್ನ ಬರೆಯುತ್ತಿದ್ದಾರೆ. ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಒಟ್ಟು 114 ರನ್ ಕಲೆಹಾಕುವ ಮೂಲಕ ಪ್ರಸಕ್ತ ವರ್ಷದ ಎಲ್ಲಾ ಸ್ವರೂಪದಲ್ಲೂ 2 ಸಾವಿರ ರನ್ ಪೂರ್ಣಗೊಳಿಸಿದ ಸಾಧನೆ ಮಾಡಿದ್ದಾರೆ.
ಭಾರತದ ಆತಿಥ್ಯದಲ್ಲಿ ನಡೆದಿದ್ದ ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಕೊಹ್ಲಿ 50ನೇ ಶತಕ ಸಿಡಿಸುವ ಮೂಲಕ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ಸಾರ್ವಕಾಲಿಕ ದಾಖಲೆಯನ್ನ ನುಚ್ಚುನೂರು ಮಾಡಿದ್ದರು. ಇಡೀಗ ದಕ್ಷಿಣ ಆಫ್ರಿಕಾ ವಿರುದ್ಧ ಅರ್ಧಶತಕ ಸಿಡಿಸುವ ಮೂಲಕ 146 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಮಹತ್ವದ ಮೈಲುಗಲ್ಲು ತಲುಪಿದ್ದಾರೆ.
ಕೊಹ್ಲಿ ಸಪ್ತ ಸಾಧನೆ:
ವಿರಾಟ್ ಕೊಹ್ಲಿ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನ ಆರಂಭಿಸಿದಾಗಿನಿಂದಲೂ ಉತ್ತಮ ಫಾರ್ಮ್ನಲ್ಲಿದ್ದು, ಒಂದೇ ಕ್ಯಾಲೆಂಡರ್ ವರ್ಷದಲ್ಲಿ 7 ಬಾರಿ 2000 ರನ್ ಗಳಿಸಿದ ಮೊದಲ ಆಟಗಾರ ಎಂಬ ಖ್ಯಾತಿಯನ್ನೂ ಗಳಿಸಿದ್ದಾರೆ. 2012 (2,186 ರನ್), 2014 (2,286 ರನ್), 2016 (2,595 ರನ್), 2017 (2,818 ರನ್), 2018 (3,735 ರನ್) ಹಾಗೂ 2019ರಲ್ಲಿ (2,455 ರನ್) ಈ ಸಾಧನೆ ವಿರಾಟ್ ಮಾಡಿದ್ದಾರೆ. ಆದ್ರೆ, 2000 ರಿಂದ 2022ರ ವರೆಗೆ ತಮ್ಮ ಬ್ಯಾಟಿಂಗ್ ಫಾರ್ಮ್ ಕಳೆದುಕೊಂಡಿದ್ದರಿಂದ ಕೊಹ್ಲಿ ಪ್ರಮುಖ ಸಾಧನೆಗಳನ್ನು ಮಾಡುವಲ್ಲಿ ಎಡವಿದ್ದರು. ಆದ್ರೆ 2022ರ ಟಿ20 ಏಷ್ಯಾಕಪ್ ಮೂಲಕ ಭರ್ಜರಿ ಕಂಬ್ಯಾಕ್ ಮಾಡಿದ ಕೊಹ್ಲಿ 2023ರಲ್ಲಿ ಮಹತ್ವದ ಮೈಲುಗಲ್ಲುಗಳನ್ನ ತಲುಪುವಲ್ಲಿ ಯಶಸ್ವಿಯಾಗಿದ್ದಾರೆ. 1877ರಲ್ಲಿ ಕ್ರಿಕೆಟ್ ಆರಂಭವಾದಾಗಿನಿಂದಲೂ ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಖ್ಯಾತಿಗೂ ಕಾರಣರಾಗಿದ್ದಾರೆ.