ಬೆಂಗಳೂರು: ಏಪ್ರಿಲ್ 26 ರಂದು ನಡೆಯಲಿರುವ ಲೋಕಸಭೆ ಚುನಾವಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವ ಮೂಲಕ ತಪ್ಪದೇ ಪ್ರಜಾಪ್ರಭುತ್ವದ ಹಬ್ಬವನ್ನು ನಾವೆಲ್ಲರೂ ಆಚರಿಸೋಣ ಎಂದು ವಿಧಾನ ಪರಿಷತ್ ಸದಸ್ಯರಾದ ಟಿ.ಎ ಶರವಣ ಅವರು ಮತದಾರರಲ್ಲಿ ಮನವಿ ಮಾಡಿದ್ದಾರೆ. ವಿಡಿಯೋ ಮೂಲಕ ಮತದಾರರಲ್ಲಿ ಮನವಿ ಮಾಡಿರುವ ಅವರು,
ಬೆಳಗ್ಗೆ 7 ಗಂಟೆಯಿಂದ ಸಂಜೆ ಆರರವರೆಗೆ ಉತ್ತಮ ನಾಯಕರನ್ನು ಆಯ್ಕೆ ಮಾಡುವ ಸುವರ್ಣವಾಕಾಶ ನಮ್ಮ ಕೈಯಲ್ಲಿದೆ. ಆದ್ದರಿಂದ ಮತದಾರರು ಯಾರ ಪ್ರಭಾವಕ್ಕೂ ಒಳಗಾಗದೆ ಸೂಕ್ತ ಅಭ್ಯರ್ಥಿಯನ್ನು ಆರಿಸಬೇಕು.
ವಿದ್ಯಾವಂತ ಮತದಾರರು ತಮ್ಮ ಕುಟುಂಬದವರು ಮತ್ತು ತಮ್ಮ ಆಪ್ತರಿಗೆ ಮತದಾನ ಮಾಡಲು ಪ್ರೋತ್ಸಾಹಿಸಬೇಕು. ಜೊತೆಗೆ ದೇಶದ ಅಭಿವದ್ಧಿಯನ್ನು ಗಮನದಲ್ಲಿರಿಸಿ ಮತದಾನ ಮಾಡಿ ಉತ್ತಮ ಪ್ರತಿನಿಧಿಗಳನ್ನು ಆರಿಸುವುದು ನಮ್ಮ ಕರ್ತವ್ಯ ಮತ್ತು ಹಕ್ಕು ಆಗಿದೆ ಎಂದು ವಿಧಾನ ಪರಿಷತ್ ಸದಸ್ಯ ಟಿ.ಎ ಶರವಣ ಹೇಳಿದ್ದಾರೆ.