ಬೆಂಗಳೂರು:- 2024 ರ ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಇಂದಿನಿಂದ 80 ವರ್ಷ ಮೇಲ್ಪಟ್ಟವರಿಗೆ ಅಂಚೆ ಮೂಲಕ ಮತದಾನ ನಡೆಯಲಿದೆ.
ಕರ್ನಾಟಕದಲ್ಲಿ 2 ಹಂತದಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಏಪ್ರಿಲ್ 26 ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ. ಮೇ 7 ರಂದು 2ನೇ ಹಂತದ ಚುನಾವಣೆ ನಡೆಯಲಿದೆ.
ಇಂದಿನಿಂದ 80 ವರ್ಷ ಮೇಲ್ಪಟ್ಟವರಿಗೆ ಮತದಾನ ನಡೆಸಲು ಚುನಾವಣಾಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಬೆಳಗ್ಗೆ 9 ಗಂಟೆಯಿಂದ ಪ್ರಕ್ರಿಯೆ ಆರಂಭವಾಗಲಿದೆ. ಅಂಚೆ ಮತದಾನದ ಮೂಲಕ ವೋಟಿಂಗ್ ನಡೆಯುತ್ತೆ. 80 ವರ್ಷ ಮೇಲ್ಪಟ್ಟವರು ಹಾಗೂ ವಿಶೇಷ ಚೇತನರಿಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ.
ಆಯಾ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳಿಂದ ಮತದಾನ ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. 80 ವರ್ಷ ಮೇಲ್ಪಟ್ಟವರು ಅಂಚೆ ಮೂಲಕ ಮತದಾನ ಹಾಕಬಹುದು.
ಭಾರತದಲ್ಲಿ ಒಟ್ಟು 543 ಲೋಕಸಭಾ ಕ್ಷೇತ್ರಗಳಿಗೆ 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 19ರಿಂದ ಮತದಾನ ಆರಂಭವಾಗಲಿದ್ದು, ಜೂನ್ 1ಕ್ಕೆ ಮುಕ್ತಾಯಗೊಳ್ಳಲಿದೆ. ಜೂನ್ 4, 2024ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.