ಬಾಗಲಕೋಟೆ : ‘ಸಮಾಜದಲ್ಲಿನ ಜಾತಿ ತಾರತಮ್ಯ, ಶೋಷಣೆ, ದಬ್ಬಾಳಿಕೆ, ಕಂದಾಚಾರಗಳನ್ನು ಕಂಡ ಬಸವಣ್ಣನವರು ಇದರ ಬಗ್ಗೆ ತಮ್ಮನ್ನು ತಾವೇ ಪ್ರಶ್ನೆ ಮಾಡಿಕೊಂಡು, ಯಾರಿಗೂ ಹೆದರದೇ ತಮ್ಮ ಮನಸ್ಸಿನಲ್ಲಿ ಬಂದ ಸತ್ಯವನ್ನು ಸಮಾಜಕ್ಕೆ ತಿಳಿಸಿದರು. ಅದೇ ಸತ್ಯದ ಮಾರ್ಗದಲ್ಲಿ ನಡೆಯುವ ಮೂಲಕ ಬಸವಣ್ಣನವರು ಇಡೀ ದೇಶ ಹಾಗೂ ಸಮಾಜಕ್ಕೆ ಬೆಳಕಾಗಿದ್ದಾರೆ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ( Congress Leader Rahul Gandhi ) ಅವರು ಬಸವಣ್ಣನ ಗುಣಗಾನ ಮಾಡಿದರು.
ಬಸವ ಜಯಂತಿ ( Basavara Jayanthi ) ಅಂಗವಾಗಿ ಬಾಗಲಕೋಟೆ ಜಿಲ್ಲೆಯ ಕೂಡಲ ಸಂಗಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಅವರು ಭಾಗವಹಿಸಿ ಬಸವಣ್ಣನ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಲಿಂಗಾಯತ ಸಮುದಾಯದ ವಿವಿಧ ಸ್ವಾಮೀಜಿಗಳು, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್ ಹಾಗೂ ಮತ್ತಿತರ ನಾಯಕರು ಉಪಸ್ಥಿತರಿದ್ದರು. ಬಸವಣ್ಣನವರ ಜಯಂತಿ ದಿನ ನಾನು ಇಲ್ಲಿಗೆ ಬಂದಿರುವುದು ನನಗೆ ಬಹಳ ಸಂತೋಷವಾಗಿದೆ. ನನ್ನನ್ನು ಈ ಕಾರ್ಯಕ್ರಮಕ್ಕೆ ಕರೆದು ಆತಿಥ್ಯ ನೀಡಿದ್ದೀರಿ ನಿಮಗೆ ಧನ್ಯವಾದಗಳು. ಸ್ವಾಮೀಜಿಗಳು ತಮ್ಮ ಭಾಷಣದ ವೇಳೆ ಹಿಂದಿಯಲ್ಲಿ ನನಗೆ ಅರ್ಥ ಮಾಡಿಸಿದರು ಅದಕ್ಕಾಗಿ ನಾನು ಅವರಿಗೂ ಧನ್ಯವಾದ ತಿಳಿಸಿದರು.
ಬಸವಣ್ಣನವರು ಲೋಕತಂತ್ರದ ದಾರಿಯನ್ನು ಭಾರತ ಹಾಗೂ ಪ್ರಪಂಚಕ್ಕೆ ಪರಿಚಯಿಸಿದರು. ಇದು ಸತ್ಯವಾಗಿದ್ದು, ಇದನ್ನು ನಾಶಪಡಿಸಲು ಸಾಧ್ಯವಿಲ್ಲ. ನಂತರ ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಬಂದಿದ್ದು, ಸಂಸತ್ತು, ಅಧಿಕಾರ ಬಂದಿದೆ. ಬಸವಣ್ಣನವರ ಆದರ್ಶಗಳು ಈ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಅಡಗಿದೆ. ನಿಮ್ಮಲ್ಲಿ ಕತ್ತಲು ಆವರಿಸಿದರೆ, ಎಲ್ಲೋ ಒಂದು ಕಡೆಯಿಂದ ಬೆಳಕು ಗೋಚರಿಸುತ್ತದೆ. ಅದೇ ರೀತಿ ಸಮಾಜದಲ್ಲಿ ಸಮಾಜದಲ್ಲಿ ಕತ್ತಲು ಆವರಿಸಿದಾಗ ಬಸವಣ್ಣನವರು ಬೆಳಕಾಗಿ ಮೂಡಿದರು. ವ್ಯಕ್ತಿಗಳು ಸುಕಾಸುಮ್ಮನೆ ಬೆಳಕು ನೀಡುವುದಿಲ್ಲ ಎಂದರು.