ಬೆಂಗಳೂರು: ಸಚಿವ ಸ್ಥಾನ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಇದ್ದೆ ಎಂದು ಸಲೀಂ ಅಹಮ್ಮದ್,(Salim Ahmed) ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ನನಗೂ ಸಚಿವ ಸ್ಥಾನ ಸಿಗಬಹುದು ಅನ್ನೋ ನಿರೀಕ್ಷೆಯಲ್ಲಿದ್ದೆ. ಪರಿಷತ್ನ ಮೂವರು ಸದಸ್ಯರಿಗೆ ಸಚಿವ ಸ್ಥಾನ ನೀಡುವ ಕುರಿತು ಚರ್ಚೆ ನಡೆದಿತ್ತು. ಆದರೆ ಯಾರನ್ನೂ ಸಚಿವಸ್ಥಾನಕ್ಕೆ ಪರಿಗಣಿಸಿಲ್ಲ. ಇದು ಬೇಸರ ತಂದಿದೆ.
ಮುಂದಿನ ದಿನಗಳಲ್ಲಿ ಏನಾಗುತ್ತೋ ಕಾದು ನೋಡಿ ಎಂದು ಸಲೀಂ ಅಹಮ್ಮದ್ ಹೇಳಿದ್ದಾರೆ. ಇನ್ನೂ ಇದೇ ವೇಳೆ ಬಿಕೆ ಹರಿಪ್ರಸಾದ್ ರಾಜೀನಾಮೆ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಸಚಿವ ಸ್ಥಾನ ಸಿಗದ ಬಿಕೆ ಹರಿಪ್ರಸಾದ್ ಬೇಸರಗೊಂಡು ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ವಿಚಾರ ಮಾಧ್ಯಮಗಳಿಂದ ತಿಳಿಯಿತು. ಅವರು ನನಗೆ ಸಿಕ್ಕಿಲ್ಲ. ಬಿಕೆ ಹರಿಪ್ರಸಾದ್ ಭೇಟಿಯಾಗಿ ಮಾತನಾಡುತ್ತೇನೆ ಎಂದು ಸಲೀಂ ಅಹಮ್ಮದ್ ಹೇಳಿದ್ದಾರೆ.