ಕೊಪ್ಪಳ:-ತ್ರಿವಳಿ ರಾಜ್ಯಗಳ ಲಕ್ಷಾಂತರ ರೈತರ ಜೀವನಾಡಿ ತುಂಗಭದ್ರಾ ಜಲಾಶಯ. ಬಳ್ಳಾರಿ, ಕೊಪ್ಪಳ, ರಾಯಚೂರು ಮತ್ತು ವಿಜಯನಗರ ಸೇರಿ ನೆರೆಯ ಆಂಧ್ರಪ್ರದೇಶ, ತೆಲಂಗ್ಆಣ ರಾಜ್ಯಗಳ ಲಕ್ಷಾಂತರ ರೈತರ ಪಾಲಿಗೆ ತುಂಗಭದ್ರಾ ಜಲಾಶಯ ಅನ್ನದ ಬಟ್ಟಲಾಗಿದೆ
ತುಂಗಭದ್ರಾ ಜಲಾಶಯ ಅಚ್ಚುಕಟ್ಟು ಪ್ರದೇಶದ ರೈತರ ಗಮನವಿಟ್ಟು ಈ ಸುದ್ದಿ ನೋಡಿ. ತುಂಗಭದ್ರಾ ಜಲಾಶಯವು, ಬಳ್ಳಾರಿ, ವಿಜಯನಗರ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಯ ರೈತರ ಪಾಲಿಗೆ ತುಂಗಭದ್ರಾ ಜಲಾಶಯ ಜೀವನಾಡಿಯಾಗಿದೆ.
ಕೆಲವರು ಭತ್ತ ನಾಟಿ ಮಾಡಿದರೆ ಇನ್ನು ಕೆಲವರು ಕಡಲೆ, ಜೋಳ, ಹತ್ತಿ, ತೊಗರಿ ಸೇರಿದಂತೆ ನಾನಾ ಬೆಳೆಗಳನ್ನು ಬೆಳೆಯುತ್ತಾರೆ.ಇನ್ನು ಒಂದೊಂದು ಬಾರಿ ಎರಡು ಬೆಳೆಗೆ ನೀರು ಒದಗಿಸಿದ್ರೆ, ಇನ್ನೂ ಕೆಲವರು ಬಾರಿ ಒಂದೇ ಬೆಳೆಗೆ ಮಾತ್ರ ನೀರು ಒದಗಿಸಲಾಗುತ್ತೆ. ಅದರಂತೆ ಈ ಬಾರಿಯೂ ಸಹ ಬೇಸಿಗೆ ಬೆಳೆಗೆ ಅರ್ಧದಲ್ಲೇ ನೀರಿನ ಅಭಾವ ಕಾಡತೊಡಗಿದೆ. ಈಗಾಗಲೇ ರೈತರು ಸುಗ್ಗಿ ಬೆಳೆಯನ್ನು ತೆಗೆದುಕೊಂಡಿದ್ದಾರೆ.
ಇದೀಗ ಬೇಸಿಗೆ ಬೆಳೆಗೆ ಭತ್ತ ನಾಟಿ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈಗ ರೈತರು ಭತ್ತ ನಾಟಿ ಮಾಡಬಾರದು ಎಂದು ಅಧಿಕಾರಿಗಳು ಸಲಹೆ ನೀಡಿದ್ದದಾರೆ.
ಜಲಾಶಯದಿಂದ ಎರಡನೇ ಬೆಳೆಗೆ ಮಾರ್ಚ್ ಅಂತ್ಯದವರಗೆ ಮಾತ್ರ ನೀರು ಬಿಡುತ್ತೇವೆ. ಹೀಗಾಗಿ ಈಗ ಭತ್ತ ನಾಟಿ ಮಾಡಬೇಡಿ. ಮಾರ್ಚ್ ನಂತರ ರೈತರ ಬೆಳೆಗೆ ನೀರು ಬಿಡುವುದಿಲ್ಲ. ಬೆಳೆ ಒಣಗಿದರೆ ನಾವು ಹೊಣೆಯಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಇದರಿಂದ ರೈತರು ಆತಂಕ್ಕೀಡಾಗಿದ್ದಾರೆ.
ಅಚ್ಚುಕಟ್ಟು ಪ್ರದೇಶವಾಗಿರೋ ಕೊಪ್ಪಳ ಜಿಲ್ಲೆಯ ಗಂಗಾವತಿ, ಕಾರಟಗಿ, ರಾಯಚೂರು, ವಿಜನಯಗರ, ಬಳ್ಳಾರಿಯ ಜಿಲ್ಲೆಯ ಹಲವಡೇ ಇಂದಿಗೂ ರೈತರು ಜಲಾಶಯ ನೀರನ್ನು ನಂಬಿ ಭತ್ತದ ನಾಟಿ ಮಾಡುತ್ತಿದ್ದಾರೆ. ಆದ್ರೆ ಜಲಾಶಯ ನೀರನ್ನು ನಂಬಿಕೊಂಡು, ಇನ್ನು ಮುಂದೆ ಭತ್ತ ನಾಟಿ ಮಾಡಿದ್ರೆ, ಅವರಿಗೆ ಜಲಾಶಯದ ನೀರು ಸಿಗದು ಅಂತ ಅಧಿಕಾರಿಗಳು ಖಡಕ್ ವಾರ್ನಿಂಗ್ ನ್ನು ರೈತರಿಗೆ ರವಾನಿಸಿದ್ದಾರೆ. ರೈತರ ಬೆಳೆಗೆ ಮಾರ್ಚ್ ಅಂತ್ಯದವರಗೆ ಮಾತ್ರ ನೀರು ಬಿಡ್ತೇವೆ. ಅನಂತರ ನೀರು ಬಿಡೋದಿಲ್ಲಾ ಅಂತ ಹೇಳ್ತಿದ್ದಾರೆ. ಇದಕ್ಕೆ ಕಾರಣ, ಬೇಸಿಗೆಯಲ್ಲಿ ಕುಡಿಯುವ ನೀರಿಗಾಗಿ ಜಲಾಶಯದಲ್ಲಿ ನೀರನ್ನು ಸಂಗ್ರಹಿಸಿಟ್ಟುಕೊಳ್ಳಬೇಕಾದ ಅನಿವಾರ್ಯತೆ ಇದೆ
ಕಳೆದ ನವಂಬರ್ ತಿಂಗಳಲ್ಲಿ ನೀರಾವರಿ ಸಲಹಾ ಸಮಿತಿ ಸಭೆಯಾಗಿದ್ದು, ಸಭೆಯ ತೀರ್ಮಾನದಂತೆ ಜನವರಿ 1 ರಿಂದ ಮಾರ್ಚ 31 ರವರಗೆ ಎರಡನೇ ಬೆಳೆಗೆ ನೀರನ್ನು ಹಂಚಿಕೆ ಮಾಡಲಾಗಿದೆ. ಎಡದಂಡೆ ಕಾಲುವೆಗೆ ಪ್ರತಿ ದಿನ 3800 ಕ್ಯೂಸೆಕ್ ನೀರನ್ನು ಇದೀಗ ಪ್ರತಿದಿನ ಹರಿಸಲಾಗುತ್ತಿದೆ. ಎಪ್ರಿಲ್ 1 ರಿಂದ ಕೇವಲ ಕುಡಿಯುವ ನೀರಿಗಾಗಿ ಮಾತ್ರ ಜಲಾಶಯ ನೀರು ಮೀಸಲಾಗಿರುತ್ತದೆ.
ಸದ್ಯ ಜಲಾಶಯದಲ್ಲಿ 53 ಟಿಎಂಸಿ ನೀರು ಸಂಗ್ರಹವಿದ್ದು, ಜಲಾಶಯಕ್ಕೆ ಯಾವುದೇ ಒಳಹರಿವು ಇಲ್ಲ. ಇನ್ನು ಎಲ್ಲಾ ಕಾಲುವೆ, ಆಂಧ್ರದ ಕೋಟಾ ತಗೆದ್ರೆ, ಏಪ್ರಿಲ್ ನಂತರ ಜಲಾಶಯದಲ್ಲಿ ಹೆಚ್ಚುಕಡಿಮೆ ಎಂಟರಿಂದ ಹತ್ತು ಟಿಎಂಸಿ ನೀರು ಉಳಿಯೋ ಸಾಧ್ಯತೆಯಿದ್ದು,ಇದರಲ್ಲಿ ಡೆಡ್ ಸ್ಟೋರೇಜ್ ತಗೆದ್ರೆ ಆರೇಳು ಟಿಎಂಸಿ ನೀರು ಮಾತ್ರ ಉಳಿಯುತ್ತದೆ. ಅದನ್ನು ಕಡ್ಡಾಯವಾಗಿ ಬೇಸಿಗೆಯಲ್ಲಿ ಕುಡಿಯುವ ನೀರಿಗಾಗಿ ಕಾಯ್ದಿರಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ. ಹೀಗಾಗಿ ಎಪ್ರಿಲ್ 1 ರಿಂದ ರೈತರ ಬೆಳೆಗಳಿಗೆ ನೀರು ಬಿಡುವಿದಲ್ಲ. ಇದೀಗ ನಾಟಿ ಮಾಡಿದ್ರೆ, ಎಪ್ರಿಲ್ ಅಂತ್ಯದವರಗೆ ನೀರು ಬೇಕಾಗುತ್ತದೆ. ಅಲ್ಲಿವರಗೆ ನೀರು ಬಿಡಲು ಆಗುವುದಿಲ್ಲ. ಇದನ್ನು ರೈತರು ಅರ್ಥ ಮಾಡಿಕೊಂಡು, ಭತ್ತದ ಬದಲಾಗಿ, ಅಲ್ಪಾವಧಿ ಬೆಳೆಗಳನ್ನು ಬೇಕಾದ್ರೆ ಬೆಳೆಯಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
![Demo](https://prajatvkannada.com/wp-content/uploads/2023/08/new-Aston-Band.jpeg)