ಬೆಂಗಳೂರು: ಇಂದು(ಜೂ.27) ಕೆಂಪೇಗೌಡರ ಜಯಂತಿ ಹಿನ್ನೆಲೆ ನಾಡಿನ ಸಮಸ್ತ ಜನತೆಗೆ, ಜಗತ್ತಿನೆಲ್ಲೆಡೆ ನೆಲೆಸಿರುವ ಕನ್ನಡಿಗರೆಲ್ಲರಿಗೂ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿಯ ಶುಭಾಶಯಗಳು ಕೋರಿದ ಸಿಎಂ ಸಿದ್ದರಾಮಯ್ಯ.
ವಿಧಾನಸೌಧದ ಮುಂಭಾಗದಲ್ಲಿರುವ ಕೆಂಪೇಗೌಡ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡಿದ್ದಾರೆ. ಈ ವೇಳೆ ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್, ಸಚಿವ ಕೃಷ್ಣ ಭೈರೇಗೌಡ ಸಾಥ್ ನೀಡಿದರು.
ರಾಜ್ಯದ31 ಜಿಲ್ಲೆಗಳಲ್ಲೂ ಕೆಂಪೇಗೌಡ ಜಯಂತಿ ಆಚರಿಸುತ್ತಿದ್ದೇವೆ ಎಂದು ವಿಧಾನಸೌಧ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕೆಂಪೇಗೌಡ ಜಯಂತಿ ಕುರಿತು ಮಾತನಾಡಿದ ಅವರು ‘ಈ ಹಿಂದೆ ನಮ್ಮ ಸರ್ಕಾರ ಕೆಂಪೇಗೌಡ ಜಯಂತಿ ಆರಂಭಿಸಿದ್ದು. ಸರ್ಕಾರದಿಂದ ಕೆಂಪೇಗೌಡ ಜಯಂತಿ ಆಚರಿಸಲು ಆದೇಶ ನೀಡಿದ್ದೆವು. ಕೆಂಪೇಗೌಡ ಪ್ರಾಧಿಕಾರವನ್ನು ರಚನೆ ಮಾಡಿದ್ದು ನಾವೇ ಎಂದು ಹೇಳಿದರು.