ಬೆಳಗಾವಿ: ಅಥಣಿ ಕ್ಷೇತ್ರ ಟಿಕೆಟ್ ಗೊಂದಲ ವಿಚಾರವಾಗಿ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮಹೇಶ್ ಕುಮಟಳ್ಳಿ ಮತ್ತು ಲಕ್ಷ್ಮಣ ಸವದಿ ಜೊತೆಗೆ ಮಾತನಾಡಿದ್ದೇನೆ. ಟಿಕೆಟ್ ವಿಚಾರದಲ್ಲಿ ಪಕ್ಷ ಏನು ತೀರ್ಮಾನ ತೆಗೆದುಕೊಳ್ಳುತ್ತೆ ಅದಕ್ಕೆ ಬದ್ದ ಇರಬೇಕು ಅಂತಾ ಸೂಚಿಸಿದ್ದೇನೆ. ಬಹಿರಂಗವಾಗಿ ಯಾರೂ ಮಾತನಾಡಬೇಡಿ ಅಂತಾ ಹೇಳಿದ್ದೇನೆ. ಒಂದೇರಡು ಸಣ್ಣ ಪುಟ್ಟ ತೊಂದರೆಗಳಿವೆ ಅವು ಸರಿ ಮಾಡಿದ್ದೇನೆ. ನಾವು ಎಲ್ಲರೂ ಒಗ್ಗಟ್ಟಾಗಿ ಇದ್ದೇವೆ ನಾವು ಒಗ್ಗಟ್ಟು ಇಲ್ಲ ಎನ್ನುವ ಪ್ರಶ್ನೆ ಇಲ್ಲಾ ಎಂದರು. ಜಾರಕಿಹೊಳಿ ಸಹೋದರರ ಕ್ಷೇತ್ರ ಬದಲಾವಣೆ ಮಾಡಬೇಕೆನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು,
ಅದು ಗುಪ್ತ ವಿಚಾರ ಅದನ್ನು ಪಾರ್ಟಿಯಲ್ಲಿ ಚರ್ಚೆ ಮಾಡುತ್ತೇವೆ. ನಾವು ಎಲ್ಲರೂ ಒಗ್ಗಟ್ಟಾಗಿ ಇದ್ದೇವೆ, ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತೇವೆ ಎಂದರು. ಇನ್ನೂ ಜಿಲ್ಲೆಯ 18 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಲು ಚಿಂತಿಸಿದ್ದೇವೆ. ಜಿಲ್ಲೆಯ ಪ್ರತಿಯೊಬ್ಬರ ನಾಯಕರ ಜತೆ ಪ್ರತ್ಯೇಕವಾಗಿ ಚರ್ಚಿಸಿದ್ದೇನೆ ಎಂದು ಜೋಶಿ ಹೇಳಿದ್ದಾರೆ. ಏ.8 ಅಥವಾ 9ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ. ಸನ್ನದ್ಧರಾಗಿ ಎಂದು ಜಿಲ್ಲಾ ಕೋರ್ ಕಮಿಟಿ ಸಭೆಯಲ್ಲಿ ಸೂಚಿಸಿದ್ದೇನೆ. ಸಾಮಾನ್ಯವಾಗಿ 18 ಕ್ಷೇತ್ರಗಳ ಪೈಕಿ 16ರಲ್ಲಿ ಗೆಲ್ಲುತ್ತೇವೆ ಎಂದು ಹೇಳುತ್ತಿದ್ದರು. ಆದರೆ ಜಿಲ್ಲಾ ಕೋರ್ ಕಮಿಟಿ ಸಭೆ ನಂತರ 18 ಕ್ಷೇತ್ರದಲ್ಲೂ ಗೆಲುವು ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.