ಬೆಂಗಳೂರು: ಜಾತಿಗಣತಿ ವರದಿ ರಾಜಕೀಯ ಪ್ರೇರಿತ ಎಂದು ಬೆಂಗಳೂರಿನಲ್ಲಿ ಬಿಜೆಪಿ ಶಾಸಕ ಡಾ.ಅಶ್ವತ್ಥ್ ನಾರಾಯಣ ಹೇಳಿಕೆ ನೀಡಿದ್ದಾರೆ.
ರಾಜ್ಯ ಸರ್ಕಾರ ಸದುದ್ದೇಶದಿಂದ ಜಾತಿಗಣತಿ ವರದಿ ಪಡೆಯುತ್ತಿಲ್. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗಿನಿಂದ ರಾಜಕೀಯ ಮಾಡ್ತಿದ್ದಾರೆ. ಈ ಸಮೀಕ್ಷೆ ಸರಿಯಾಗಿ ಆಗಿಲ್ಲ ಅಂತಾ ಪ್ರತಿಯೊಬ್ಬರೂ ಹೇಳ್ತಿದ್ದಾರೆ. ಜಾತಿ ಗಣತಿಗೆ ನಮ್ಮ ಸಂಪೂರ್ಣ ವಿರೋಧ ಇದೆ.
ಸರ್ಕಾರ ಈವರೆಗೆ ಒಂದೂ ಭರವಸೆದಾಯಕ ಕೆಲಸ ಮಾಡಿಲ್ಲ. ರಾಹುಲ್ ಹೇಳಿದರೆಂದು ವರದಿ ಮೇಲೆ ರಾಜಕೀಯ ಮಾಡ್ತಿದ್ದಾರೆ. ಸರ್ಕಾರದ ನಿಲುವು ನೋಡಿಕೊಂಡು ನಾವು ಮುಂದುವರಿಯುತ್ತೇವೆ ಎಂದರು.