ರಾಮನಗರ: ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಬೇಕೆಂಬುದು ನಮ್ಮ ಆಸೆ. 28 ಸ್ಥಾನ ಗೆದ್ದು ಪ್ರಧಾನಿಗೆ ಗಿಫ್ಟ್ ಕೊಡಬೇಕು ಅಂದುಕೊಂಡಿದ್ದೇವೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ರಾಮನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತಂದೆಯವರ ಜೊತೆ ಸೀಟು ಹಂಚಿಕೆ ವಿಚಾರವಾಗಿ ಚರ್ಚೆ ನಡೆಯುತ್ತಿದೆ. ನಾವು ಹೆಚ್ಚು ಸೀಟು ಕೇಳಿಲ್ಲ. ಕೇವಲ 3 ರಿಂದ 4 ಸ್ಥಾನಗಳನ್ನಷ್ಟೇ ಕೇಳುತ್ತಿದ್ದೇವೆ ಎಂದರು.
ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಬೇಕೆಂಬುದು ನಮ್ಮ ಆಸೆ. 28 ಸ್ಥಾನ ಗೆದ್ದು ಪ್ರಧಾನಿಗೆ ಗಿಫ್ಟ್ ಕೊಡಬೇಕು ಅಂದುಕೊಂಡಿದ್ದೇವೆ ಎಂದು ಹೇಳಿದ ನಿಖಿಲ್, ಕೋಲಾರ ವಿಧಾನ ಸಭಾ ಚುನಾವಣೆಯಲ್ಲಿ 5 ಲಕ್ಷ ಮತಗಳನ್ನು ಪಡೆದಿದೆ. ಹೀಗಾಗಿ ಅಲ್ಲಿ ಸೀಟು ಸಿಗಬಹದೆಂಬ ಆಶಾಭಾವನೆ ಇದೆ ಎಂದರು.
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಾ.ಮಂಜುನಾಥ್ ಗೆಲ್ಲಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಿದ್ದೇವೆ. ಚುನಾವಣೆ ಸಮರ್ಥವಾಗಿ ಎದುರಿಸುತ್ತೇವೆ. ಮಂಜುನಾಥ್ ಅವರು 17 ವರ್ಷಗಳ ಕಾಲ ಜಯದೇವಕ್ಕೆ ಹೊಸ ರೂಪಕೊಟ್ಟಿದ್ದಾರೆ. ಇಡೀ ದೇಶದಲ್ಲಿ ಹೆಸರಾಂತ ಡಾಕ್ಟರ್ ಅನ್ನೋದು ಗೊತ್ತಿರುವ ವಿಚಾರ ಎಂದರು.
ಬೆಂಗಳೂರು ಗ್ರಾಮಾಂತರ ಕ್ಷೇತ್ರ ಸುಮಾರು 27 ಲಕ್ಷ ಮತದಾರರನ್ನ ಹೊಂದಿರುವ ಕ್ಷೇತ್ರವಾಗಿದೆ. ಇಲ್ಲಿ ಡಾ.ಮಂಜುನಾಥ್ ಮೈತ್ರಿ ಅಭ್ಯರ್ಥಿಯಾಗಿ ಆಯ್ಕೆ ಆಗಿದ್ದಾರೆ. ಈಗಾಗಲೇ ಬಿಜೆಪಿ ನಾಯಕರು ಚುನಾವಣಾ ಕಾರ್ಯ ಆರಂಭಿಸಿದ್ದಾರೆ. ಮಂಜುನಾಥ್ ಅವರ ವೈದ್ಯಕೀಯ ಸೇವೆ ಹೆಸರುವಾಸಿಯಾಗಿದೆ. ಹಾಗಾಗಿ ಅವರನ್ನ ಈ ಚುನಾವಣೆಯಲ್ಲಿ ನಿಲ್ಲಿಸಬೇಕು ಅಂತ ಬಿಜೆಪಿ ವರಿಷ್ಠರು ಮನವಿ ಮಾಡಿದರು. ಹಾಗಾಗಿ ಡಾ.ಮಂಜುನಾಥ್ ಅವರು ಬಿಜೆಪಿ ಚಿಹ್ನೆ ಮೇಲೆ ಸ್ಪರ್ಧೆ ಮಾಡುತ್ತಿದ್ದಾರೆ ಎಂದರು.