ದಾವಣಗೆರೆ: ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ನಡುವೆ ಮುಖ್ಯಮಂತ್ರಿ ಕುರ್ಚಿ ವಾರ್ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಪರ ಸಚಿವ ಸತೀಶ್ ಜಾರಕಿಹೊಳಿ (Satish Jarakiholi)ಬ್ಯಾಟ್ ಬೀಸಿದ್ದಾರೆ. ತಲಾ ಎರಡೂವರೆ ವರ್ಷ ಅಂತಾ ಇದುವರೆಗೂ ಯಾರೂ ಹೇಳಿಲ್ಲ. ಹೀಗಾಗಿ ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಮುಂದುವರಿಯುತ್ತಾರೆ. ಅದು ಪಕ್ಷದ ನಿರ್ಧಾರಕ್ಕೆ ಬಿಟ್ಟ ವಿಚಾರ ಎಂದರು.
ಇನ್ನೂ ಅನ್ನಭಾಗ್ಯ ಅಕ್ಕಿ ಖರೀದಿ ಸಂಬಂಧ ಎಲ್ಲವನ್ನೂ ಸರಿಪಡಿಸುತ್ತೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಅಕ್ಕಿ ವಿಚಾರಕ್ಕೆ ಬಿಜೆಪಿಯವರು ಧರಣಿ ಮಾಡುತ್ತೇವೆಂದು ಹೇಳುತ್ತಿದ್ದಾರೆ, ಇದು ಬಿಜೆಪಿಯವರಿಗೆ ಸಂಬಂಧಪಟ್ಟ ವಿಚಾರವಲ್ಲ. ಪ್ರಧಾನಿ ಮೋದಿ 15 ಲಕ್ಷ ಕೊಡುತ್ತೇವೆ ಅಂತ ಹೇಳಿದ್ದರು, ಈವರೆಗೆ ಕೊಟ್ಟಿಲ್ಲ. ಬಿಜೆಪಿಯವರು ನೀಡಿದ್ದ 10 ಭರವಸೆಗಳು ಹಾಗೆಯೇ ಇವೆ. ಕಾಲಾವಕಾಶ ಬೇಕು ಎಲ್ಲಾವನ್ನು ಸರಿ ಮಾಡುತ್ತೇವೆ ಎಂದರು.