ಬೆಂಗಳೂರು: ಕಾಂಗ್ರೆಸ್ ಭರ್ಜರಿ ಗೆದ್ದ ಬಳಿಕ ಜನ ಗ್ಯಾರಂಟಿಗಳನ್ನ ಯಾವಾಗ ನೀಡುವುದೆಂದು ಪ್ರಶ್ನೆ ಮಾಡುತ್ತಲೇ ಇದ್ದಾರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ 5 ಗ್ಯಾರಂಟಿಗಳ ಜಾರಿ ಬಗ್ಗೆ ಸಭೆಯಲ್ಲಿ ಸಂಪೂರ್ಣವಾಗಿ ಚರ್ಚೆ ಆಗಿದೆ ಎಂದು ಬೆಂಗಳೂರಿನಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಗ್ಯಾರಂಟಿಗಳನ್ನು ಜಾರಿ ಮಾಡೇ ಮಾಡುತ್ತೇವೆ. 5 ಗ್ಯಾರಂಟಿಗಳ ವಿಚಾರವಾಗಿ ಅಧಿಕಾರಿಗಳು ಮಾಹಿತಿ ಕೊಟ್ಟಿದ್ದಾರೆ. ಮಾನದಂಡ ಇಲ್ಲದೆ ಯಾವ ಯೋಜನೆ ಇದೆ ಹೇಳಿ ನೋಡೋಣ. ಜನರಿಗೆ ನಾವು ಲೆಕ್ಕ ಕೊಡಬೇಕು ಅಲ್ವಾ ಎಂದಿದ್ದಾರೆ.