ಬೆಳಗಾವಿ: ರಾಷ್ಟ್ರೀಯ ಶಿಕ್ಷಣ ನೀತಿ ಬದಲಿಗೆ ರಾಜ್ಯ ಶಿಕ್ಷಣ ನೀತಿ ಜಾರಿಗೆ ತರುತ್ತೇವೆ ಎಂದು ಬೆಳಗಾವಿಯಲ್ಲಿ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಹೇಳಿದರು.
ಎರಡು ವರ್ಷಗಳ ಹಿಂದೆ ಹಿಂದಿನ ಸರ್ಕಾರದಲ್ಲಿ ನಮ್ಮ ರಾಜ್ಯದಲ್ಲಿ ಮಾತ್ರ ಅನುಷ್ಠಾನ ಮಾಡಿದೆ.
ಅದಕ್ಕೆ ಬಹಳಷ್ಟು ಪೂರ್ವ ತಯಾರಿ ಆಗಬೇಕಿತ್ತು, ಅದರಲ್ಲಿ ಕೆಲ ನ್ಯೂನತೆಗಳು ಇವೆ. ಈ ಎಲ್ಲವನ್ನೂ ಶಿಕ್ಷಣ ತಜ್ಞರ ಜೊತೆಗೆ ಚರ್ಚಿಸುತ್ತಿದ್ದೇವೆ ಎಂದರು.
ನೂತನ ರಾಜ್ಯ ಸರ್ಕಾರದ ಮೊದಲ ಬಜೆಟ್ನ್ನು ಜುಲೈ 7 ರಂದು ಮಂಡನೆ ಮಾಡಲು ನಿರ್ಧರಿಸಲಾಗಿದೆ. ಈ ಹಿನ್ನಲೆ ಹಣಕಾಸು ಇಲಾಖೆಯ ಅಧಿಕಾರಿಗಳ ಜೊತೆ ಸಿಎಂ ಬಜೆಟ್ ಪೂರ್ವಭಾವಿ ಸಭೆ ಮುಂದುವರೆದಿದೆ. ವಸಂತನಗರದ ಹಣಕಾಸು ಇಲಾಖೆಯ ಕಚೇರಿಯಲ್ಲಿ ಸಭೆ ನಡೆಯುತ್ತಿದೆ.