ಚೆನ್ನೈ: ಮುಂದಿನ ದಿನಗಳಲ್ಲಿ ತಮಿಳುನಾಡಿನ ನಾಯಕರೊಬ್ಬರನ್ನು ದೇಶದ ಪ್ರಧಾನಿಯನ್ನಾಗಿ (Tamil PM) ಮಾಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿಕೆ ನೀಡುವ ಮೂಲಕ ಸಂಚಲನ ಮೂಡಿಸಿದ್ದಾರೆ. ತಮಿಳುನಾಡು ಪ್ರವಾಸ ಕೈಗೊಂಡಿರುವ ಅಮಿತ್ ಶಾ ಭಾನುವಾರ ರಾಜ್ಯ ಬಿಜೆಪಿಯ ಹಿರಿಯ ನಾಯಕರ ಜೊತೆ ಆಪ್ತ ಸಮಾಲೋಚನಾ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಭಾಗಿಯಾದ ಹಿರಿಯ ನಾಯಕರು ಅಮಿತ್ ಶಾ ಅವರ ಹೇಳಿಕೆಯ ಬಗ್ಗೆ ಮಾತನಾಡಿದ್ದಾರೆ ಎಂದು ಮೂಲಗಳನ್ನು ಆಧಾರಿಸಿ ಮಾಧ್ಯಮ ವರದಿ ಮಾಡಿದೆ.
ಮುಂಬರುವ ದಿನಗಳಲ್ಲಿ ತಮಿಳುನಾಡಿನ ವ್ಯಕ್ತಿ ಈ ದೇಶದ ಪ್ರಧಾನಿಯಾಗಲಿದ್ದಾರೆ ಎನ್ನುವ ರೀತಿಯ ಮಾತುಗಳನ್ನು ಆಡಿದ್ದಾರೆ. ಆದರೆ ಈ ಕುರಿತು ಅಮಿತ್ ಶಾ ಹೆಚ್ಚಿನ ವಿವರ ನೀಡಲಿಲ್ಲ ಎಂದು ತಿಳಿಸಿದ್ದಾರೆ. ಈ ಹಿಂದೆ ತಮಿಳರಿಗೆ ಪ್ರಧಾನಿಯಾಗುವ ಅವಕಾಶ ಎರಡು ಬಾರಿ ಸಿಕ್ಕಿತ್ತು. ಆದರೆ ಡಿಎಂಕೆಯಿಂದಾಗಿ (DMK) ಈ ಅವಕಾಶ ಕೈತಪ್ಪಿತ್ತು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಕನಿಷ್ಠ 20 ಸ್ಥಾನ ಗೆಲ್ಲಲು ಪ್ರಯತ್ನಿಸಬೇಕು ಎಂದು ಕರೆ ನೀಡಿದ್ದಾರೆ.