ಬೆಂಗಳೂರು:- ಮೋದಿ ಮತ್ತೆ ಪ್ರಧಾನಿ ಆಗಲು ಶ್ರಮಿಸುತ್ತೇವೆ ಎಂದು ಮಾಜಿ ಸಚಿವ ವಿ ಸೋಮಣ್ಣ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಟಿಕೆಟ್ ಬಗ್ಗೆ ಯಾವುದೇ ಚರ್ಚೆ ಮಾಡಿಲ್ಲ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂಬುದು ದೇಶದ ಜನರ ಅಭಿಪ್ರಾಯ. ಈ ನಿಟ್ಟಿನಲ್ಲಿ ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ. ಎಲ್ಲವೂ ರಾಷ್ಟ್ರದ ಅಭಿವೃದ್ಧಿಗಾಗಿ ಎಂದು ಅವರು ಹೇಳಿದ್ದಾರೆ.
ಕರ್ನಾಟಕದ ಕೆಲವೊಂದು ಕಹಿ ಘಟನೆ ನೋಡಿದರೆ, ಮೋದಿ ಮತ್ತೊಮ್ಮೆ ಪ್ರಧಾನಿಯಾಗುವ ಅಗತ್ಯದ ಬಗ್ಗೆ ಮಾತುಕತೆ ನಡೆದಿದೆ. ತುಮಕೂರು ಕ್ಷೇತ್ರದ ಬಗ್ಗೆ ಯಾವುದೇ ಚರ್ಚೆ ಮಾಡಿಲ್ಲ. ಈ ಹಿಂದೆ ನಾನೂ ಆಕಾಂಕ್ಷಿ ಎಂದಿದ್ದೆ. ಅದೆಲ್ಲ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಯಾಗಿ ಮುಂದುವರೆಯುತ್ತದೆ ಎಂದಿದ್ದಾರೆ.
ಜೆಡಿಎಸ್ನಿಂದ ಸ್ಪರ್ಧೆ ವಿಚಾರ ಊಹಾಪೋಹ. ಅಂತಹ ಯಾವುದೇ ಪ್ರಕ್ರಿಯೆ ನಡೆದಿಲ್ಲ. ನಾವ್ಯಾರೂ ದೊಡ್ಡವರಲ್ಲ, ರಾಜಕೀಯದಲ್ಲಿ ಆರೇಳು ಸಿಎಂ ಜೊತೆ ಕೆಲಸ ಮಾಡಿದ್ದೇನೆ. 45 ವರ್ಷಗಳಿಂದ ಮಣ್ಣು ಹೊತ್ತಿದ್ದೇನೆ. ಇದೆಲ್ಲಕ್ಕಿಂತ ದೇಶ ಮುಖ್ಯ ಎಂದಿದ್ದಾರೆ.