ಸಿಹಿ ವಿಷಯ ಬಂದರೆ ಹೆಚ್ಚಿನ ಜನರು ಅಗತ್ಯಕ್ಕಿಂತ ಹೆಚ್ಚಿನದನ್ನು ಸೇವಿಸುತ್ತಾರೆ. ನಮ್ಮಲ್ಲಿ ಬಹುತೇಕ ಜನರು ಶಿಫಾರಸ್ಸು ಮಾಡಿದಕ್ಕಿಂತ ಹೆಚ್ಚು ಸಕ್ಕರೆಯನ್ನು ಸೇವಿಸುತ್ತಾರೆ.ಅತಿಯಾದ ಸಕ್ಕರೆ ದೇಹದಲ್ಲಿ ಉರಿಯೂತಕ್ಕೆ ಕಾರಣವಾಗಬಹುದು ಇದು ತೂಕ ಹೆಚ್ಚಾಗುವುದನ್ನು ಸೇರಿದಂತೆ ಹಲವಾರು ಆರೋಗ್ಯ ಸಮಸ್ಯೆಗಳಿಗೂ ಸಹ ಕಾರಣವಾಗುತ್ತದೆ
ಸಕ್ಕರೆ ಕಡುಬಯಕೆಗಳನ್ನು ನಿಗ್ರಹಿಸಲು ಮತ್ತು ಒಟ್ಟಾರೆ ಆರೋಗ್ಯವನ್ನು ಸುಧಾರಿಸಲು ಕನಿಷ್ಠ ಒಂದು ವಾರದಿಂದ ಒಂದು ತಿಂಗಳವರೆಗೆ ಸಕ್ಕರೆ ಸೇವಿಸುವುದನ್ನು ನಿಲ್ಲಿಸಿದಾಗ ಉಂಟಾಗುತ್ತದೆ.ಇದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ
- ಕ್ಯಾಲೊರಿಗಳನ್ನು ಕಡಿಮೆ ಮಾಡಲು ಇದು ಸಹಾಯ ಮಾಡುತ್ತದೆ ಮತ್ತು ನಿಮ್ಮ ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ.
- ಸಕ್ಕರೆ ಸೇವಿಸಬೇಕೆಂಬ ಕಡುಬಯಕೆಯನ್ನು ಕಡಿಮೆ ಮಾಡುತ್ತದೆ.
- ಹೃದ್ರೋಗ ಮತ್ತು ಮಧುಮೇಹದಂತಹ ದೀರ್ಘಕಾಲದ ಕಾಯಿಲೆಗಳನ್ನು ಬೆಳೆಸುವ ಅಪಾಯವನ್ನು ಕಡಿಮೆ ಮಾಡುತ್ತದೆ.
- ದಂತಕ್ಷಯ, ಹಲ್ಲಿನ ಬಣ್ಣ ಮತ್ತು ದುರ್ವಾಸನೆಯನ್ನು ಕಡಿಮೆ ಮಾಡುವ ಮೂಲಕ ನಿಮ್ಮ ಬಾಯಿಯ ಆರೋಗ್ಯವನ್ನು ಸುಧಾರಿಸುತ್ತದೆ.
- 2014 ರಲ್ಲಿ ನಡೆಸಿದ ಒಂದು ಅಧ್ಯಯನದ ಪ್ರಕಾರ, ಕಡಿಮೆ ಸಕ್ಕರೆ ಸೇವಿಸುವ ಜನಕ್ಕಿಂತ ಹೆಚ್ಚು ಸಕ್ಕರೆ ಸೇವಿಸುವ ಜನರು ಸಾಯುವುದರಲ್ಲಿ ಶೇಕಡ 38ರಷ್ಟು ಹೆಚ್ಚಿನ ಅಪಾಯವನ್ನು ಹೊಂದಿದ್ದಾರೆ ಎಂದು ಅಧ್ಯಯನದಿಂದ ತಿಳಿದುಬಂದಿದೆ.
ಸಕ್ಕರೆ ಮುಕ್ತ ಆಹಾರವು ದೇಹವನ್ನು ತ್ವರಿತವಾಗಿ ಬದಲಾಯಿಸಬಹುದು. ಸಕ್ಕರೆಯನ್ನು ನಿಲ್ಲಿಸುವುದು ಅಥವಾ ಮಿತಿಗೊಳಿಸುವುದು ದೇಹದಲ್ಲಿ ಅನೇಕ ಸಕಾರಾತ್ಮಕ ಬದಲಾವಣೆಗಳಿಗೆ ಕಾರಣವಾಗಬಹುದು. ಆರಂಭದಲ್ಲಿ ಕೆಲವು ತೊಂದರೆಗಳಾಗಬಹುದು. ಆದರೆ ಕಾಲಾನಂತರದಲ್ಲಿ ಚಯಾಪಚಯವು ಸುಧಾರಿಸುತ್ತದೆ. ಬೊಜ್ಜು ಮತ್ತು ಸಂಬಂಧಿತ ಆರೋಗ್ಯ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ಮೊಡವೆಗಳನ್ನು ಕಡಿಮೆ ಮಾಡುತ್ತದೆ. ತ್ವಚೆಯ ಆರೋಗ್ಯಕ್ಕೆ ಶುಗರ್ ಇಲ್ಲದ ಆಹಾರವು ಪ್ರಯೋಜನಕಾರಿಯಾಗಿದೆ. ಮಾತ್ರವಲ್ಲ ಇದು ದೇಹವು ಫಿಟ್ ಆಗಿರಲು ಸಹಾಯ ಮಾಡುತ್ತದೆ
ಕಡಿಮೆ ಸಕ್ಕರೆಯ ಆಹಾರವು ರಕ್ತದ ಲಿಪಿಡ್ ಮಟ್ಟವನ್ನು ಸುಧಾರಿಸುವ ಮೂಲಕ ಹೃದ್ರೋಗದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹೆಚ್ಚು ಸಕ್ಕರೆಯನ್ನು ಸೇವಿಸುವುದು, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸಬಹುದು. ಇದು ಮಧುಮೇಹವನ್ನು ಅಭಿವೃದ್ಧಿಪಡಿಸುವ ಅಪಾಯವನ್ನು ಹೆಚ್ಚಿಸುತ್ತದೆ. ಸಕ್ಕರೆ ಸೇವನೆಯನ್ನು ಮಿತಿಗೊಳಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರಗೊಳಿಸಲು ಮತ್ತು ಮಧುಮೇಹದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಸಕ್ಕರೆಯನ್ನು ಕಡಿಮೆ ಮಾಡುವುದು ಎಂದರೆ ಸಕ್ಕರೆಯನ್ನು ಬೆಲ್ಲ ಅಥವಾ ಕೃತಕ ಸಿಹಿಕಾರಕಗಳೊಂದಿಗೆ ಬದಲಿಸುವುದು ಎಂದಲ್ಲ. ಸಕ್ಕರೆ ಮತ್ತು ಬೆಲ್ಲದಲ್ಲಿ ಒಂದೇ ಪ್ರಮಾಣದ ಕ್ಯಾಲೋರಿಗಳಿವೆ. ಹೀಗಾಗಿ ಸಂಪೂರ್ಣವಾಗಿ ಸಿಹಿತಿಂಡಿ, ಜ್ಯೂಸ್ ಹೀಗೆ ಸಕ್ಕರೆಯುಕ್ತ ಆಹಾರಗಳಿಂದ ದೂರವಿರಬೇಕಾದುದು ಅವಶ್ಯಕವಾಗಿದೆ.