ಮಂಕಿಪಾಕ್ಸ್ ಎಂಬ ವೈರಸ್ನಿಂದ ಹರಡುವ ರೋಗವೇ ಮಂಕಿಪಾಕ್ಸ್. ಈ ವೈರಸ್ ಸಿಡುಬಿಗೆ ಕಾರಣವಾಗುವ ವೈರಾಣುವಿನ ವರ್ಗಕ್ಕೆ ಸೇರಿದ್ದಾಗಿದೆ. ಕ್ಲಾಡ್ ಐ ಮತ್ತು ಕ್ಲಾಡ್ ಐಐ ಎಂಬ ಎರಡು ವಿಧದ ಮಂಕಿಪಾಕ್ಸ್ ಸೋಂಕುಗಳಿವೆ. ಕ್ಲಾಡ್ ಐ ಮಧ್ಯ ಆಫ್ರಿಕಾದಲ್ಲಿ ಕಂಡುಬಂತು. ಕ್ಲಾಡ್ ಐಐ ಪಶ್ಚಿಮ ಆಫ್ರಿಕಾದಲ್ಲಿ ಪತ್ತೆಯಾಗಿದೆ. ಐಬಿ ಎಂದು ಕರೆಯಲ್ಪಡುವ ಕ್ಲಾಡ್ ಐನ ಹೊಸ ರೂಪಾಂತರ ಬಹುಬೇಗ ಹರಡುತ್ತದೆ.
ಮೊದಲು ಪತ್ತೆಯಾಗಿದ್ದೆಲ್ಲಿ?
ಆಫ್ರಿಕಾ ಖಂಡದ ದೇಶಗಳು. (1958ರಲ್ಲಿ ಮಂಕಿಪಾಕ್ಸ್ ಮೊದಲ ಬಾರಿಗೆ ಪತ್ತೆಯಾಯಿತು. ಈ ವೈರಾಣುವಿನ ಮೂಲ ಯಾವುದು ಎಂದು ಈವರೆಗೆ ಪತ್ತೆಯಾಗಿಲ್ಲ
ಸೋಂಕಿನ ಲಕ್ಷಣಗಳೇನು?
ಸೋಂಕು ತಗುಲಿದ ನಂತರ 6ರಿಂದ 13 ದಿನಗಳಲ್ಲಿ ರೋಗ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ 5ರಿಂದ 21 ದಿನಗಳ ಅವಧಿಯಲ್ಲೂ ಕಾಣಿಸಿಕೊಳ್ಳಬಹುದು.
* ಜ್ವರ
* ತೀವ್ರವಾದ ತಲೆನೋವು
* ದುಗ್ಧರಸ ಗ್ರಂಥಿಗಳಲ್ಲಿ ಊತ
* ಬೆನ್ನು ನೋವು
* ಸ್ನಾಯು ನೋವು
* ತೀವ್ರತರ ನಿತ್ರಾಣ
* ಮುಖ, ಕೈ, ಕಾಲುಗಳು, ಹಸ್ತ, ಪಾದಗಳಲ್ಲಿ ದುದ್ದುಗಳು
* 95% ಪ್ರಕರಣಗಳಲ್ಲಿ ಮುಖದಲ್ಲಿಯೇ ಹೆಚ್ಚು ದುದ್ದುಗಳು ಕಾಣಿಸಿಕೊಳ್ಳುತ್ತವೆ
ಹರಡುವುದು ಹೇಗೆ?
ಸೋಂಕು ಪೀಡಿತ ಪ್ರಾಣಿಯಿಂದ ಮನುಷ್ಯರಿಗೆ, ವ್ಯಕ್ತಿಯಿಂದ ವ್ಯಕ್ತಿಗೆ ಮಂಕಿಪಾಕ್ಸ್ ವೈರಸ್ ಹರಡುತ್ತದೆ.
* ಸೋಂಕು ತಗುಲಿದ ಪ್ರಾಣಿಗಳ ಜೊತೆ ನೇರ ಸಂಪರ್ಕ ಹೊಂದುವ ಮನುಷ್ಯರಿಗೆ ರೋಗ ಹರಡುತ್ತದೆ.
* ರೋಗಕಾರಕ ಪ್ರಾಣಿಗಳ ರಕ್ತ, ಚರ್ಮ, ಗಾಯದಿಂದ.
* ರೋಗ ತಗುಲಿರುವ ಪ್ರಾಣಿಗಳ ಮಾಂಸ ಸೇವನೆ.
* ಸೋಂಕಿತ ವ್ಯಕ್ತಿಯ ಉಸಿರಾಟದಿಂದ ಹೊರಬೀಳುವ ಕಣಗಳಿಂದ.
* ಸೋಂಕಿತನ ಚರ್ಮದ ಗಾಯದಲ್ಲಿನ ಕೀವಿನಿಂದ.
* ಹೊಕ್ಕುಳಬಳ್ಳಿಯ ಮೂಲಕ ತಾಯಿಯಿಂದ ಭ್ರೂಣಕ್ಕೆ ಸೋಂಕು ಪ್ರಸರಣ.
* ಪ್ರಸವದ ವೇಳೆ ಅಥವಾ ಪ್ರಸವಾನಂತರ ನಿಕಟ ಸಂಪರ್ಕದಿಂದ.
ತಡೆ ಹೇಗೆ?
* ಚರ್ಮದಲ್ಲಿ ದುದ್ದು ಕಾಣಿಸಿಕೊಂಡವರಿಂದ ದೂರ ಇರುವುದು, ದುದ್ದು ಮುಟ್ಟದಿರುವುದು.
* ಸೋಂಕಿತರನ್ನು ಆಲಂಗಿಸಿಕೊಳ್ಳಬೇಡಿ, ಲೈಂಗಿಕ ಸಂಪರ್ಕ ಮಾಡಬೇಡಿ.
* ಸೋಂಕಿತರೊಂದಿಗೆ ಆಹಾರ ಸೇವನೆ, ಬಟ್ಟಲು, ಲೋಟ ಇತ್ಯಾದಿ ವಸ್ತುಗಳನ್ನು ಹಂಚಿಕೊಳ್ಳದಿರುವುದು.
* ಸೋಂಕಿತರು ಬಳಿಸಿದ ಬಟ್ಟೆ, ಟವಲ್, ಹೊದಿಕೆ ಮುಟ್ಟದಿರುವುದು.
* ಸೋಂಕಿತ ಪ್ರಾಣಿಗಳನ್ನು ಮುಟ್ಟದಿರುವುದು.
* ಸೋಂಕಿತರಿಂದ ಪ್ರತ್ಯೇಕವಾಗಿ ಇರಬೇಕು.
ವೈದ್ಯಕೀಯ ಚಿಕಿತ್ಸೆಯನ್ನು ಯಾವಾಗ ಪಡೆಯಬೇಕು?:
- ಮಧ್ಯ ಅಥವಾ ಪಶ್ಚಿಮ ಆಫ್ರಿಕನ್ ದೇಶಗಳಿಗೆ ಅಥವಾ ಇತರ ದೇಶಗಳಿಗೆ ಮಂಕಿಪಾಕ್ಸ್ ದೃಢಪಡಿಸಿದ ಪ್ರಕರಣಗಳೊಂದಿಗೆ ಅವರ ರೋಗಲಕ್ಷಣಗಳು ಪ್ರಾರಂಭವಾಗುವ ಮೊದಲಿನ ತಿಂಗಳಿನಲ್ಲಿ ಪ್ರಯಾಣಿಸಿದ್ದರೆ ವೈದ್ಯರ ಬಳಿ ಚಿಕಿತ್ಸೆ ಪಡೆಯಬೇಕು.
- ದೃಢಪಡಿಸಿದ ಅಥವಾ ಶಂಕಿತ ಮಂಕಿಪಾಕ್ಸ್ ಹೊಂದಿರುವ ವ್ಯಕ್ತಿಯೊಂದಿಗೆ ಸಂಪರ್ಕವನ್ನು ಹೊಂದಿದ್ದರೆ.
- ಮಂಕಿಪಾಕ್ಸ್ ಇರುವ ಇತರರೊಂದಿಗೆ ನಿಯಮಿತವಾಗಿ ಅಥವಾ ನಿಕಟ ಸಂಪರ್ಕವನ್ನು ಹೊಂದಿರುವ ವ್ಯಕ್ತಿ ವೈದ್ಯರನ್ನು ಭೇಟಿಯಾಗಬೇಕು.