ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹ ಲಕ್ಷ್ಮಿ’ ಯೋಜನೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಇನ್ನೂ 4-5 ದಿನ ಕಾರಣಾಂತರಗಳಿಂದ ಯೋಜನೆ ಜಾರಿ ವಿಳಂಬ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಈಗಾಗಲೇ 3 ಯೋಜನೆ ಜಾರಿಗೊಳಿಸಿದ್ದೇವೆ. ನವೆಂಬರ್- ಡಿಸೆಂಬರ್ನಿಂದ ಯುವ ನಿಧಿ ಯೋಜನೆ ಜಾರಿಗೊಳಿಸುತ್ತೇವೆ ಎಂದರು.ಗೃಹಲಕ್ಷ್ಮಿ ಯೋಜನೆ ಜಾರಿಗೆ ಸಲ್ಪ ಸಮಯ ಬೇಕಿದೆ. ಮನೆ ಕುಟುಂಬದ ಯಜಮಾನಿಗೆ 2 ಸಾವಿರ ರೂಪಾಯಿ ಹಾಕಬೇಕಿರುವುದರಿಂದ ಅವರ ಬಗ್ಗೆ ಮಾಹಿತಿ ಸಂಗ್ರಹಿಸಲು ಸಮಯಾವಕಾಶ ಬೇಕಾಗಿದೆ. ಹಾಗಾಗಿ ಸ್ವಲ್ಪ ವಿಳಂಬವಾಗಿದೆ. ಆಗಸ್ಟ್ 16ರಿಂದ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಹೇಳಿದರು.
ಅರ್ಜಿ ಸಲ್ಲಿಕೆ ವೇಳೆ ಎದುರಾಗುವ ನೂಕುನುಗ್ಗಲು ಎದುರಾಗುವ ಸಾಧ್ಯತೆಗಳಿವೆ ಎಂಬ ಅಭಿಪ್ರಾಯಗಳು ವ್ಯಕ್ತವಾಗಿದ್ದು. ಕೆಲವು ಸಚಿವರು ಮತ್ತು ಅಧಿಕಾರಿಗಳು ಗ್ರಾಮ ಪಂಚಾಯಿತಿ ಮತ್ತು ನಾಡಕಚೇರಿ ಕೇಂದ್ರಗಳಲ್ಲಿನ ಬಾಪೂಜಿ ಸೇವಾ ಕೇಂದ್ರವನ್ನು ಕೂಡ ಬಳಕೆ ಮಾಡಿಕೊಳ್ಳಬೇಕೆಂದು ಸಲಹೆ ನೀಡಿದ್ದಾರೆ. ಯೋಜನೆಯನ್ನು ಹೆಚ್ಚು ಜನಸ್ನೇಹಿಯನ್ನಾಗಿ ಮಾಡಲು ಅರ್ಜಿ ಪ್ರಕ್ರಿಯೆಯು 4-5 ದಿನಗಳಿಂದ ವಿಳಂಬವಾಗಲಿದೆ ಎಂದರು.