ಜಿ7 ಶೃಂಗ ಸಭೆಯಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ಇಟಲಿಗೆ ತೆರಳಿದ್ದರು. ಸಭೆ ಮುಗಿದ ನಂತರ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ಮೋದಿ ಅವರೊಂದಿಗೆ ಸೆಲ್ಫಿ ವಿಡಿಯೋ ಮಾಡಿ #Melodi ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಇಟಲಿಯಲ್ಲಿ ನಡೆದ ಜಿ7 ರಾಷ್ಟ್ರಗಳ ಸಭೆಗೆ ವಿಶೇಷ ಆಹ್ವಾನಿತರಾಗಿ ಮೋದಿ ಹೋಗಿದ್ದರು. ಕಾರ್ಯಕ್ರಮ ಮುಗಿದ ಬಳಿಕ ಮೆಲೋನಿ ಅವರು ಮೋದಿ ಜೊತೆ ಸೆಲ್ಫಿ ಕ್ಲಿಕ್ಕಿಸಿ ‘Hello From The Melody Team’ ಎಂದು ಬರೆದು ಪೋಸ್ಟ್ ಮಾಡಿದ್ದಾರೆ.
ಮೆಲೋನಿ ಅವರು ಮೋದಿ ಅವರ ಜೊತೆ ಸೆಲ್ಫಿ ಕ್ಲಿಕ್ಕಿಸುತ್ತಿರುವುದು ಇದೇ ಮೊದಲೆನಲ್ಲ. ಈ ಹಿಂದೆ ದುಬೈನಲ್ಲಿ ವಿಶ್ವಸಂಸ್ಥೆಯ ಹವಾಮಾನ ಸಮ್ಮೇಳನ ನಡೆದಿತ್ತು. ಈ ವೇಳೆ ಮೋದಿ ಮತ್ತು ಮೆಲೋನಿ ಭಾಗವಹಿಸಿದ್ದರು. ಈ ಸಂದರ್ಭದಲ್ಲೂ ಮೆಲೋನಿ ಅವರು ಜೊತೆ ಸೆಲ್ಪಿ ತೆಗೆದುಕೊಂಡಿದ್ದರು.