ಕಲಬುರಗಿ: ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಯವರು ಏನ್ ತಪ್ಪು ಮಾಡಿದ್ದಾರೆ ಸಾಯಿಸೋಕೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ (Priyank Kharge) ಕಿಡಿಕಾರಿದ್ದಾರೆ.
ಖರ್ಗೆ ಕುಟುಂಬವನ್ನ ಸಾಫ್ (ಕೊಲೆ) ಮಾಡ್ತೇನೆ ಎಂಬ ಬಿಜೆಪಿ ಅಭ್ಯರ್ಥಿ (BJP Candidate) ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಖರ್ಗೆ ಸಾಹೇಬರು ಏನ್ ತಪ್ಪು ಮಾಡಿದ್ದಾರಮ್ಮ ಸತ್ತುಹೊಡಿಯೋಕೆ. ನಾನೇನು ತಪ್ಪು ಮಾಡಿದ್ದೀನಾ ಅಥವಾ ನಮ್ಮ ಮಕ್ಕಳು ತಪ್ಪು ಮಾಡಿದ್ದಾರಾ..?, 50 ವರ್ಷ ರಾಜಕೀಯ ಜೀವನದಲ್ಲಿ ಜನರ ಒಳಿತಿಗೆ ದುಡಿದಿದ್ದಾರೆ. ಖರ್ಗೆ ಸಾಹೇಬ್ರು ಜನರ ಒಳಿತಿಗೆ ರಾಜಕೀಯದಲ್ಲಿ ದುಡಿದಿದ್ದಾರೆ. ಆದ್ರೆ ಖರ್ಗೆ ಫ್ಯಾಮಿಲಿ ಸಾಫ್ ಮಾಡ್ತೇನೆ ಅಂತ ಹೇಳ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಏನಿದು ಪ್ರಕರಣ..?: ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ (Manikanth Rathod) ಮತ್ತು ಬಿಜೆಪಿ ಕಾರ್ಯಕರ್ತ ರವಿ ಮಧ್ಯೆ ನಡೆದ ಸಂಭಾಷಣೆಯ ಆಡಿಯೋವನ್ನು ಸುರ್ಜೇವಾಲಾ (Randeep Surjewala) ಬಿಡುಗಡೆ ಮಾಡಿದ್ದಾರೆ.
ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಮೂಲಕ ಜೀವ ಬೆದರಿಕೆ ಹಾಕಲಾಗಿದೆ. ಖರ್ಗೆ ಹೆಂಡತಿ, ಮಕ್ಕಳನ್ನು ಸಾಫ್ ಮಾಡುತ್ತೇನೆ ಎಂಬ ಸಂಭಾಷಣೆಯಿದೆ. ಬಿಜೆಪಿಯವರು ಖರ್ಗೆಯವರ ಕುಟುಂಬಕ್ಕೆ ಹಿಂಸೆ ನೀಡುತ್ತಿದ್ದಾರೆ ಎಂದು ಸುರ್ಜೇವಾಲಾ ಕಿಡಿಕಾರಿದರು.
ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಬಿಜೆಪಿಯವರು ಖರ್ಗೆ ಹತ್ಯೆಗೆ ಉತ್ತೇಜನ ನೀಡುತ್ತಿದ್ದಾರೆ. ಒಬ್ಬ ದಲಿತ ವ್ಯಕ್ತಿ ಈ ಮಟ್ಟಕ್ಕೆ ಬೆಳೆದಿರುವುದು ಅವರಿಗೆ ಸಹಿಸಲು ಆಗುತ್ತಿಲ್ಲ. ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಆಡಿಯೋ ಬಗ್ಗೆ ಪ್ರಧಾನಿ ಮೋದಿ ಆಗಲಿ, ಸಿಎಂ ಬೊಮ್ಮಾಯಿ ಚುನಾವಣಾ ಆಯೋಗವಾಗಲಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಾಗ್ದಾಳಿ ನಡೆಸಿದರು.