ಬೆಳಗಾವಿ: ಅಕ್ಕಿ ವಿಚಾರವಾಗಿ ಕೇಂದ್ರದ ಮೇಲೆ ಸಿಎಂ ಸಿದ್ದರಾಮಯ್ಯ (Siddaramaiah) ಆರೋಪ ವಿಚಾರದ ಕುರಿತು ಮಾತನಾಡಿದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ (Laxman Savadi) ಅವರು, ಕೇಂದ್ರ ಸರ್ಕಾರದಿಂದ ಬರಬೇಕಾದ ಐದು ಕೆಜಿ ಅಕ್ಕಿ ಬಂದೇ ಬರುತ್ತದೆ ಎಂದರು. ಬೆಳಗಾವಿ (Belagavi) ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಐದು ಕೆಜಿ ಅಕ್ಕಿಯನ್ನು ಕೊಡಬೇಕು ಎಂದು ಚುನಾವಣಾ ಪ್ರಣಾಳಿಕೆಯಲ್ಲಿಯೇ ಹೇಳಿದೆ. ಅದರ ಬಗ್ಗೆ ಆಹಾರ ಮಂತ್ರಿಗಳು ಹಾಗೂ ಮುಖ್ಯಮಂತ್ರಿಗಳು ಚರ್ಚೆ ಮಾಡಿದ್ದಾರೆ.
ಬೇರೆ ಬೇರೆ ರಾಜ್ಯಗಳಲ್ಲಿ ಎಲ್ಲೆಲ್ಲಿ ಲಭ್ಯತೆ ಇದೆ ಅದನ್ನು ಪಡೆದುಕೊಂಡಾದರೂ ಕೊಡುವ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ ಎಂದರು. ಕೇಂದ್ರ ಸರ್ಕಾರ ಅಕ್ಕಿ ಕೊಡಲಿಲ್ಲ ಎಂಬ ಕಾರಣಕ್ಕೆ ನಾವೇನು ಆ ಯೋಜನೆ ನಿಲ್ಲಿಸುವುದಿಲ್ಲ. ಖಂಡಿತ ಆ ಯೋಜನೆಯನ್ನು ಪ್ರಾರಂಭ ಮಾಡಿಯೇ ಮಾಡುತ್ತೇವೆ. ಅಕ್ಕಿ ಬೆಳೆಯುವ ರಾಜ್ಯಗಳು ಕಡಿಮೆ ಇವೆ. ಕೇಂದ್ರ ಸರ್ಕಾರ ರಾಜಕಾರಣ ಮಾಡುತ್ತಿದೆ ಎಂಬ ಸಿದ್ದರಾಮಯ್ಯ ಆರೋಪ ವಿಚಾರಕ್ಕೆ ಅವರೇನು ಮಾಹಿತಿ ತೆಗೆದುಕೊಂಡು ಹೇಳಿದ್ದಾರೆ ಗೊತ್ತಿಲ್ಲ. ಮುಖ್ಯಮಂತ್ರಿಗಳು ಹೇಳಿದ್ದಕ್ಕೆ ನಾವು ಪರಾಮರ್ಶೆ ಮಾಡುವುದು ಸರಿಯಲ್ಲ ಎಂದು ಹೇಳಿದರು.