ನವದೆಹಲಿ: ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಪರವಾಗಿ ಬ್ಯಾಟ್ ಬೀಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, 2024ರ ಲೋಕಸಭಾ ಚುನಾವಣೆಗೂ ಮುನ್ನ ಹೊಸ ಕಾಯಿದೆ ಜಾರಿ ಮಾಡುವ ಉತ್ಸಾಹದಲ್ಲಿದ್ದಾರೆ. ದೇಶದಲ್ಲಿ ಒಂದು ಕಾನೂನಿನ ಅಗತ್ಯತೆ ಬಗ್ಗೆ ಒತ್ತಿ ಹೇಳಿರುವ ಪ್ರಧಾನಿ ಮೋದಿ ಅವರು, ನಮ್ಮ ಸರಕಾರ ಜನರ ಸಂತುಷ್ಟೀಕರಣದ ಹಾದಿಯಲ್ಲಿ ಕೆಲಸ ಮಾಡಲಿದೆ ಎಂದು ಹೇಳಿದ್ದಾರೆ.
ಚುನಾವಣೆಗೆ ಇನ್ನೊಂದು ವರ್ಷವಿರುವಾದ ಏಕಾಏಕಿ ಏಕರೂಪ ನಾಗರಿಕ ಸಂಹಿತೆ ವಿಚಾರ ಪ್ರಸ್ತಾಪ ಮಾಡಿದ ಪ್ರಧಾನಿ ನಡೆಯಿಂದ ಪ್ರತಿಪಕ್ಷಗಳು ಅಡಕತ್ತರಿಯಲ್ಲಿ ಸಿಲುಕಿವೆ. ಕೆಲವು ಪಕ್ಷಗಳು ಬಹಿರಂಗವಾಗಿಯೇ ವಿರೋಧಿಸಿದ್ದರೆ, ಕೆಲವು ಪಕ್ಷಗಳು ತಾತ್ವಿಕ ಬೆಂಬಲ ನೀಡಿವೆ. ಕೆಲವು ಪಕ್ಷಗಳು ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿವೆ.