ಭಾರತ ಫುಟ್ ಬಾಲ್ ನ ದಂತಕತೆ ಎಂದೇ ಹೆಸರಾದ ಸುನಿಲ್ ಚೆಟ್ರಿ ಅಂತಾರಾಷ್ಟ್ರೀಯ ಫುಟ್ ಬಾಲ್ ನಿಂದ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ.
ಭಾರತ ಫುಟ್ ಬಾಲ್ ತಂಡದ ನಾಯಕರೂ ಆಗಿರುವ ಸುನಿಲ್, ಜೂನ್ 6 ರಂದು ಕೋಲ್ಕತ್ತಾದಲ್ಲಿ ಕುವೈತ್ ವಿರುದ್ಧ ಫಿಫಾ ವಿಶ್ವಕಪ್ ಅರ್ಹತಾ ಪಂದ್ಯದ ನಂತರ ನಿವೃತ್ತಿಗೊಳ್ಳಲಿದ್ದಾರೆ.
ಎರಡು ದಶಕಗಳ ಕಾಲದ ತಮ್ಮ ಅದ್ಭುತ ವೃತ್ತಿಜೀವನಕ್ಕೆ ತೆರೆ ಎಳೆಯಲಿರುವ ಸುನಿಲ್ ಸುದೀರ್ಘ ಅವಧಿಗೆ ಭಾರತ ರಾಷ್ಟ್ರೀಯ ತಂಡದ ನಾಯಕರಾಗಿ ಸೇವೆ ಸಲ್ಲಿಸಿದ್ದರು.
ನಿವೃತ್ತಿ ನಿರ್ಧಾರವನ್ನು ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಪೋಸ್ಟ್ ಮಾಡಿದ ವೀಡಿಯೊ ಮೂಲಕ ಪ್ರಕಟಿಸಿದ್ದಾರೆ.