ಬೆಂಗಳೂರು:- ಬಿಜೆಪಿಯವರಿಗೆ ಆಪರೇಷನ್ ಕಮಲದ ರುಚಿ ಹತ್ತಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಬಿಜೆಪಿಯವರಿಗೆ ಜನಾದೇಶದ ಸರ್ಕಾರವನ್ನು ಉರುಳಿಸಿ ಅಧಿಕಾರಕ್ಕೆ ಬಂದು ಹಣ ತಿನ್ನುವ ರುಚಿ ಹತ್ತಿದೆ. ಹೀಗಾಗಿ ಮತ್ತೆ ಮತ್ತೆ ಸರ್ಕಾರ ಬೀಳಿಸುವ ಪ್ರಯತ್ನಕ್ಕೆ ಕೈ ಹಾಕುತ್ತಲೇ ಇರುತ್ತಾರೆ ಎಂದರು.
ನಮ್ಮ ಗ್ಯಾರಂಟಿಗಳನ್ನು ಅಣಕಿಸಿ ಈಗ ನಮ್ಮ ಗ್ಯಾರಂಟಿಗಳನ್ನೇ ಕಾಪಿ ಮಾಡಿ ಅದಕ್ಕೆ ಮೋದಿ ಗ್ಯಾರಂಟಿ ಎನ್ನುತ್ತಿದ್ದಾರೆ. ಬಿಜೆಪಿ ಯವರು ಅಷ್ಟು ನಿರ್ಲಜ್ಜರಾಗಿದ್ದಾರೆ. ದಯವಿಟ್ಟು ನಿಮ್ಮ ಹೃದಯದ ಮಾತು ಕೇಳಿ. ಸರ್ಕಾರದ ಕೆಲಸಗಳನ್ನು ಪ್ರತಿ ಮನೆಗೆ ತಲುಪಿಸಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯವರ ಸುಳ್ಳನ್ನು ಸೋಲಿಸಿ ನಮ್ಮ ಸಾಧನೆಗಳನ್ನು ಎತ್ತಿ ಹಿಡಿಯುವ ಮೂಲಕ 28 ಲೋಕಸಭಾ ಸ್ಥಾನಗಳಲ್ಲಿ ಗೆಲ್ಲಿಸಿ ಎಂದು ಕಾರ್ಯಕರ್ತರಿಗೆ ಮುಖ್ಯಮಂತ್ರಿಗಳು ಕೈ ಮುಗಿದು ಕರೆ ನೀಡಿದರು ರಾಜ್ಯದ 4 ಕೋಟಿ 30 ಲಕ್ಷ ಕನ್ನಡಿಗರಿಗೆ ಸರ್ಕಾರದ ಗ್ಯಾರಂಟಿಯ ಫಲ ಪ್ರತೀ ದಿನ-ಪ್ರತೀ ತಿಂಗಳು ತಲುಪುತ್ತಿದೆ. ಈ ಫಲಾನುಭವಿಗಳಲ್ಲಿ ಬಿಜೆಪಿಯವರೇ ಹೆಚ್ಚಿದ್ದಾರೆ
ಪಕ್ಷದ ಕಾರ್ಯಕರ್ತರೇ ನಮ್ಮ ಬೆನ್ನೆಲುಬು. ನಿಮ್ಮ ಹೋರಾಟದಿಂದ ಪಕ್ಷ ಅಧಿಕಾರಕ್ಕೆ ಬಂದಿದೆ. ಗ್ಯಾರಂಟಿ ಅನುಷ್ಠಾನ ಮೇಲ್ವಿಚಾರಣೆಗೆ ಸಮಿತಿ ರಚನೆ ಮಾಡುತ್ತೇವೆ ಎಂದ ಸಿಎಂ ಸಿದ್ದರಾಮಯ್ಯ ವಾಮ ಮಾರ್ಗದಲ್ಲಿ ಮೂರೂವರೆ ವರ್ಷ ಅಧಿಕಾರ ನಡೆಸಿದ ಬಿಜೆಪಿ ಮಾಡಬಾರದ್ದನ್ನೆಲ್ಲಾ ಮಾಡಿ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.