ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಮಹಿಳೆಯರಿಗೆ 8ನೇ ಕಂತಿನ ಹಣ ಯಾವಾಗ ಬರಲಿದೆ! ಸಂಪೂರ್ಣ ಮಾಹಿತಿ ಇಲ್ಲಿದೆ.
ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ತಾವು ನೀಡಿದ್ದ ಐದು ಭರವಸೆಗಳನ್ನು ಈಡೇರಿಸಲು ನಾನಾ ಯೋಜನೆಗಳನ್ನು ಜಾರಿಗೆ ತಂದರು. ಅದೇ ರೀತಿ ಗೃಹ ಲಕ್ಷ್ಮಿ ಯೋಜನೆ ಕೂಡ ಎಲ್ಲಾ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸಲು ಜಾರಿಗೆ ತಂದ ಯೋಜನೆಯಾಗಿದೆ. ಅದರ ಮೂಲಕ ಮನೆಯ ಆರ್ಥಿಕತೆಯನ್ನು ಸರಿದೂಗಿಸಲು ಮನೆಯ ಮಹಿಳೆಯರಿಗೆ ಆರ್ಥಿಕ ನೆರವು ನೀಡಲಾಯಿತು.
ಗೃಹಲಕ್ಷ್ಮಿ ಯೋಜನೆ ಆರಂಭವಾಗಿ ಎಂಟು ತಿಂಗಳು ಕಳೆದರೂ ಕೆಲವರಿಗೆ ಇನ್ನೂ 6 ಮತ್ತು 7ನೇ ಕಂತಿನ ಹಣ ಬಂದಿಲ್ಲ. ಗೃಹ ಲಕ್ಷ್ಮಿ ಯೋಜನೆಯಡಿ ನೋಂದಣಿಯಾದ ಪ್ರತಿಯೊಬ್ಬ ಮಹಿಳೆಯೂ ತಮ್ಮ ದಾಖಲೆಗಳನ್ನು ಮರು ಪರಿಶೀಲಿಸುವಂತೆ ಸರ್ಕಾರ ಸೂಚನೆ ನೀಡಿದೆ. ಸರ್ಕಾರದ ಸೂಚನೆಯಂತೆ ಅನೇಕರು ತಮ್ಮ ದಾಖಲೆಗಳನ್ನು ಪರಿಶೀಲಿಸಿ ನವೀಕರಿಸಿದ್ದಾರೆ.