96ನೇ ಆಸ್ಕರ್ ಪ್ರಶಸ್ತಿಗಾಗಿ ಭಾರತದಿಂದ ಅಧಿಕೃತವಾಗಿ ಆಯ್ಕೆಯಾಗಿದ್ದ, ಮಲಯಾಳಂನ 2018ನೇ ಹೆಸರಿನ ಸಿನಿಮಾ ಅಂತಿಮ ಸುತ್ತಿನ ಸ್ಪರ್ಧೆಗೆ ಎಂಟ್ರಿ ಪಡೆಯುವಲ್ಲಿ ವಿಫಲವಾಗಿದೆ. ಇದರಿಂದಾಗಿ ಸಹಜವಾಗಿಯೇ ಭಾರತೀಯ ಸಿನಿಮಾ ಪ್ರೇಕ್ಷಕರಿಗೆ ನಿರಾಸೆಯಾಗಿದೆ. ಅಂತಾರಾಷ್ಟ್ರೀಯ ಫೀಚರ್ ಫಿಲ್ಮ್ ವಿಭಾಗಕ್ಕೆ ಈ ಸಿನಿಮಾವನ್ನು ಭಾರತದಿಂದ ಆಯ್ಕೆ ಮಾಡಿ ಕಳುಹಿಸಲಾಗಿತ್ತು. ಆದರೆ, ಮುಂದಿನ ಸುತ್ತಿಗೆ ಹೋಗುವಲ್ಲಿ ಅದು ವಿಫಲವಾಗಿದೆ.
ಕಳೆದ ಸಲ ರಾಜಮೌಳಿ ನಿರ್ದೇಶನದ ‘ಆರ್.ಆರ್.ಆರ್’ ಸಿನಿಮಾದ ‘ನಾಟು ನಾಟು’ ಹಾಡಿಗಾಗಿ ಆಸ್ಕರ್ ಪ್ರಶಸ್ತಿ ಬಂದಿತ್ತು. ಈ ಬಾರಿ ದಕ್ಷಿಣದ ಮತ್ತೊಂದು ಸಿನಿಮಾ ಈ ವರ್ಷದ ಆಸ್ಕರ್ ಪ್ರಶಸ್ತಿಗಾಗಿ ನಾಮಿನೇಟ್ ಆಗಿ ಸಂಭ್ರಮಕ್ಕೆ ಕಾರಣವಾಗಿತ್ತು. ಈ ವಿಷಯವನ್ನು ಈ ಹಿಂದೆ ಆಸ್ಕರ್ ಆಯ್ಕೆ ಸಮಿತಿ ಅಧ್ಯಕ್ಷ, ಕನ್ನಡದವರೇ ಆಗಿರುವ ಗಿರೀಶ್ ಕಾಸರವಳ್ಳಿ ತಿಳಿಸಿದ್ದರು
ಟೊವಿನೋ ಥಾಮಸ್ ನಟನೆಯ 2018 ಹೆಸರಿನ ಮಲಯಾಳಂ ಸಿನಿಮಾ ವಿಶೇಷ ಕಥಾವಸ್ತುವನ್ನು ಹೊಂದಿದೆ. ಕೇರಳದಲ್ಲಿ ನಾಲ್ಕು ವರ್ಷಗಳ ಹಿಂದೆ ನಡೆದ ಅತಿವೃಷ್ಠಿ ಸೃಷ್ಟಿಸಿದ ಆವಾಂತರವನ್ನು ಆಧರಿಸಿದ ಚಿತ್ರಿಸಲಾಗಿದೆ. ಈ ಚಿತ್ರಕ್ಕೆ ಭಾರೀ ಪ್ರತಿಕ್ರಿಯೆ ಕೂಡ ಉತ್ತಮವಾಗಿತ್ತು. ಈ ಸಿನಿಮಾವನ್ನು ಕಾಸರವಳ್ಳಿ ಅಧ್ಯಕ್ಷತೆಯ ಕಮೀಟಿಯು ಆಸ್ಕರ್ ಪ್ರಶಸ್ತಿ ಸ್ಪರ್ಧೆಗಾಗಿ ಆಯ್ಕೆ ಮಾಡಲಾಗಿತ್ತು. ಈ ಆಯ್ಕೆಯು ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾ ಮೂಲಕ ನಡೆದಿತ್ತು. ಇದು ಪ್ರತಿ ವರ್ಷವೂ ಒಂದು ಸಿನಿಮಾವನ್ನು ಆಯ್ಕೆ ಮಾಡಿ, ಸರಕಾರವೇ ಉಳಿದ ವೆಚ್ಚವನ್ನು ಭರಿಸಿ ಕಳುಹಿಸುತ್ತದೆ. ಖಾಸಗಿಯಾಗಿ ಯಾವ ಸಿನಿಮಾಗಳು ಬೇಕಾದರೂ ಸ್ಪರ್ಧಿಸಬಹುದಾಗಿದೆ.