ಬೆಂಗಳೂರು: ಬಿಜೆಪಿ ಬಿಟ್ಟು ಯಾರು ಹೋಗುವುದಿಲ್ಲ. ಪಕ್ಷ ಬಿಟ್ಟು ಹೋಗುತ್ತೇವೆ ಎಂದು ಯಾರೂ ನಿಖರವಾಗಿ ಹೇಳಿಲ್ಲ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಅಭಿವೃದ್ಧಿ ಕೆಲಸ ಆಗುತ್ತಿಲ್ಲ. ಮೂರು ತಿಂಗಳಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ರಾತ್ರಿ ಕಂಡ ಬಾವಿಗೆ ಹಗಲಿನಲ್ಲಿ ಯಾರೂ ಬೀಳುವುದಿಲ್ಲ. ಈ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ ಎಂದು ಬೆಳಗಾವಿಯಲ್ಲಿ ಮಾಜಿ ಸಚಿವ ಕಾರಜೋಳ ವಾಗ್ದಾಳಿ ಮಾಡಿದರು.
ಆದ್ರೆ 15ರಿಂದ 20 ಹಾಲಿ, ಮಾಜಿ ಶಾಸಕರು ಕಾಂಗ್ರೆಸ್ ಪಕ್ಷ ಸೇರಲು ಸಿದ್ಧರಿದ್ದಾರೆ. ಈ ಕುರಿತು ಮಾತುಕತೆ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷಕ್ಕೆ ಸೇರುವವರ ಹೆಸರನ್ನು ಈಗ ಹೇಳಲು ಸಾಧ್ಯವಿಲ್ಲ. ಕೆಲವು ದಿನಗಳಲ್ಲಿ ಎಲ್ಲವೂ ಅಂತಿಮವಾಗಲಿದೆ. ಬಿಜೆಪಿ, ಜೆಡಿಎಸ್ ಮುಖಂಡರು ನಮ್ಮ ಪಕ್ಷಕ್ಕೆ ಬರುವುದು ಖಚಿತ ಎಂದು ಕೃಷಿ ಇಲಾಖೆ ಸಚಿವ ಚಲುವರಾಯಸ್ವಾಮಿ ಹೇಳಿದರು.