ಬೆಂಗಳೂರು:- ಮೇಕೆದಾಟು ವಿಚಾರದಲ್ಲಿ ನೀವು ಮೌನತಾಳಿರುವುದೇಕೆ!? ಎಂದು ಡಿಕೆಶಿಗೆ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.
ಅಧಿಕಾರ ಇರುವುದು ನಿಮ್ಮ ಕೈಯ್ಯಲ್ಲಿ. ಜನ ಪೆನ್ನು-ಪೇಪರ್ ಕೊಟ್ಟಿರುವುದೂ ನಿಮಗೆ. ಕೆಲಸ ಮಾಡಿ ಎಂದರೆ ಹಳೆಯದನ್ನು ಕೆದಕುತ್ತಿದ್ದೀರಿ, ಯಾಕೆ? ಜನರು ಕೊಟ್ಟ ಪೆನ್ನು-ಪೇಪರ್ ಹಿಡಿದುಕೊಳ್ಳುವ ನಿಮ್ಮ ಶಕ್ತಿ ಕೇವಲ ಹತ್ತೇ ತಿಂಗಳಿಗೆ ನಿಸ್ತೇಜವಾಯಿತಾ ಎಂದರು.
ಡಿಕೆ ಶಿವಕುಮಾರ್ ಅವರೇ? ಕೈಲಾಗದೆ ಮೈ ಪರಚಿಕೊಳ್ಳುವುದು ಎಂದರೆ ಇದೆ ಅಲ್ಲವೇ? ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ವಾಗ್ದಾಳಿ ಮಾಡಿದರು.
ಅಧಿಕಾರ ಇದ್ದಾಗಲೇ ಕುಮಾರಸ್ವಾಮಿ ಅವರು ಮೇಕೆದಾಟು ಮಾಡಲಿಲ್ಲ ಎಂದು ಹೇಳಿದ್ದೀರಿ! ಕುಮಾರಸ್ವಾಮಿ ಏನೂ ಮಾಡಿಯೇ ಇಲ್ಲವೆಂದು ಕಟ್ಟುಕಥೆ ಕಟ್ಟಿದ್ದೀರಿ. ಎಷ್ಟಾದರೂ ನೀವು ಸುಳ್ಳು ಫ್ಯಾಕ್ಟರಿಯ ಮೇಟಿ! ಮೇಕೆದಾಟುಗಾಗಿ ನಾನು ಏನೆಲ್ಲಾ ಮಾಡಿದೆ ಎನ್ನುವುದು ನಿಮಗೇಗೆ ಗೊತ್ತಾದೀತು? ಸತ್ಯಕ್ಕೂ ನಿಮಗೂ ಎಣ್ಣೆಶೀಗೇಕಾಯಿ ಸಂಬಂಧ! ಹೌದಲ್ಲವೇ? ಎಂದು ಪ್ರಶ್ನಿಸಿದರು.
ಮೇಕೆದಾಟು ನಿರ್ಮಾಣಕ್ಕೆ 2018-19ರಲ್ಲೇ ಸಮಗ್ರ ಯೋಜನಾ ವರದಿ (DPR) ಯನ್ನು ಕೇಂದ್ರಕ್ಕೆ ಸಲ್ಲಿಸಿದ್ದು ಅಂದಿನ ನನ್ನ ಸರಕಾರ. ಆ ಸರಕಾರದಲ್ಲಿ ನೀವು ಸಚಿವರಿದ್ದಿರಿ. ಈ ಮಾಹಿತಿಯೇ ನಿಮಗಿಲ್ಲವೆಂದರೆ ಹೇಗೆ? ಇದೆಂಥಾ ಹತವಿಧಿ!? ಹಾಗಾದರೆ, ಜನರು ಕೊಟ್ಟ ಪೆನ್ನು-ಪೇಪರ್ ಗತಿ ಏನು?” ಎಂದು ಪ್ರಶ್ನಿಸಿದರು.