ಬೆಂಗಳೂರು:– ಆರು ವರ್ಷದ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿ ಬೆಂಗಳೂರು ಪೊಲೀಸ್ ಆಯುಕ್ತರು ಹೊರಡಿಸಿದ ಆದೇಶಕ್ಕೆ ಬಾರಿ ಬೆಂಬಲ ವ್ಯಕ್ತವಾಗಿದೆ.
ಶಾಲೆಗೆ ತೆರಳುವಾಗ ದ್ವಿಚಕ್ರ ವಾಹನಗಳಲ್ಲಿ ಮಕ್ಕಳಿಗೆ ಹೆಲ್ಮೆಟ್ ಧರಿಸೋದು ಕಡ್ಡಾಯ ಮಾಡಲಾಗಿದ್ದು, ಈ ಹಿಂದೆ ಈ ಬಗ್ಗೆ ಶಿಕ್ಷಣ ಸಂಸ್ಥೆಗಳು ಧ್ವನಿ ಎತ್ತಿದವು. ಪೋಷಕರೊಂದಿಗೆ ಬೈಕ್ ಗಳಲ್ಲಿ ಶಾಲೆಗೆ ಬರುವ ಸಂಧರ್ಭದಲ್ಲಿ ಮಕ್ಕಳಿಗೆ ಸೇಫ್ಟಿ ಒದಗಿಸಲು ಸೂಚನೆ ನೀಡಲಾಗಿತ್ತು.
ಶಾಲಾ ಆವರಣಗಳಲ್ಲಿ ಹೆಲ್ಮೆಟ್ ಕಡ್ಡಾಯಗೊಳಿಸಲು ಕೆಲ ಖಾಸಗಿ ಶಾಲೆಗಳು ಪತ್ರ ಬರೆದಿದ್ದರು. ಇದೀಗಾ ಪೋಲಿಸ್ ಇಲಾಖೆಯ ನಿರ್ಧಾರಕ್ಕೆ ಬಾರಿ ಮೆಚ್ಚುಗೆ ವ್ಯಕ್ತವಾಗಿದೆ. ಇನ್ನಷ್ಟು ಹೆಚ್ಚು ಸ್ಕೂಲ್ ಗಳ ಬಳಿ ಸ್ಪೇಷಲ್ ಡ್ರೈವ್ ನಡೆಸುವಂತೆ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮನವಿ ಮಾಡಿದ್ದಾರೆ