ನವದೆಹಲಿ: ಪತಿ ಫೋನ್ ಕಾಲ್ ರಿಸೀವ್ ಮಾಡಲಿಲ್ಲ ಎಂಬ ಕಾರಣಕ್ಕೆ 37 ವರ್ಷದ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ.ಭಾನುವಾರದಂದು ಹೆಂಡತಿ ಪತಿಗೆ ಫೋನ್ ಮಾಡಿದ್ದಾರೆ. ಆದರೆ ಪತಿ ಕಾಲ್ ರಿಸೀವ್ ಮಾಡಿಲ್ಲ ಎಂದು ನೊಂದ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇವರಿಗೆ 3 ವರ್ಷಗಳ ಹಿಂದೆ ಮದುವೆಯಾಗಿದ್ದು, ಮದುವೆಯಾದ 15 ದಿನಗಳ ನಂತರ ಪತಿ ಅಮೆರಿಕಗೆ ಹೋಗಿ ನೆಲೆಸಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.