ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಇದೀಗ ತಮ್ಮ ನಿವೃತ್ತಿ ಹಿಂಪಡೆಯುವ ಸೂಚನೆ ನೀಡಿದ್ದಾರೆ.ಅಂತಾರಾಷ್ಟ್ರೀಯ ವೃತ್ತಿಜೀವನ ಮುಗಿದಿದೆ. ಆದರೆ ಮುಂಬರುವ ಚಾಂಪಿಯನ್ಸ್ ಟ್ರೋಫಿಗೆ ಆಯ್ಕೆಯಾಗುವುದಾದರೆ ನಾನು ಮತ್ತೆ ಆಸ್ಟ್ರೇಲಿಯಾ ಪರ ಕಣಕ್ಕಿಳಿಯಲಿದ್ದೇನೆ ಎಂದರು.
ಈ ಬಗ್ಗೆ ಸೋಷಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿರುವ ಡೇವಿಡ್ ವಾರ್ನರ್, ಚಾಂಪಿಯನ್ಸ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾ ಪರ ಆಡಲು ನಾನು ಮುಕ್ತನಾಗಿದ್ದೇನೆ. ಈ ಟೂರ್ನಿಗೆ ಆಯ್ಕೆಯಾಗುವುದಾದರೆ ನಾನು ಕಂಬ್ಯಾಕ್ ಮಾಡಲಿದ್ದೇನೆ ಎಂದು ತಿಳಿಸಿದ್ದಾರೆ.
ಜನವರಿ 1, 2024 ರಂದು ಡೇವಿಡ್ ವಾರ್ನರ್ ಏಕದಿನ ಕ್ರಿಕೆಟ್ಗೆ ವಿದಾಯ ಹೇಳಿದ್ದರು. ಅಲ್ಲದೆ ಜನವರಿ 6 ರಂದು ಕೊನೆಯ ಪಂದ್ಯವಾಡುವ ಮೂಲಕ ಟೆಸ್ಟ್ ಕ್ರಿಕೆಟ್ಗೂ ಗುಡ್ ಬೈ ಹೇಳಿದ್ದರು. ಅಲ್ಲದೆ ಟಿ20 ವಿಶ್ವಕಪ್ ಬಳಿಕ ಚುಟುಕು ಕ್ರಿಕೆಟ್ಗೂ ನಿವೃತ್ತಿ ಘೋಷಿಸಿದ್ದರು.
ಇದೀಗ ಚಾಂಪಿಯನ್ಸ್ ಟ್ರೋಫಿಗಾಗಿ ಏಕದಿನ ಸ್ವರೂಪದಿಂದ ತಮ್ಮ ನಿವೃತ್ತಿಯನ್ನು ಹಿಂಪಡೆಯಲು ಸಿದ್ಧನಿರುವುದಾಗಿ ಡೇವಿಡ್ ವಾರ್ನರ್ ತಿಳಿಸಿದ್ದಾರೆ. ಚಾಂಪಿಯನ್ಸ್ ಟ್ರೋಫಿಯು 2025ರ ಫೆಬ್ರವರಿ-ಮಾರ್ಚ್ ತಿಂಗಳಲ್ಲಿ ನಡೆಯಲಿದೆ. ಈ ವೇಳೆಗೆ 38 ವರ್ಷದವರಾಗಲಿರುವ ವಾರ್ನರ್ ಅವರನ್ನು ಆಯ್ಕೆಗೆ ಪರಿಗಣಿಸುವುದು ಅನುಮಾನ. ಹೀಗಾಗಿ ಡೇವಿಡ್ ವಾರ್ನರ್ ಅವರ ಕಂಬ್ಯಾಕ್ ಡೌಟ್ ಎಂದೇ ಹೇಳಬಹುದು.